Wednesday, April 10, 2024

ಐಪಿಎಲ್ 2020: ರಾಜಸ್ಥಾನ್ ರಾಯಲ್ಸ್ ವಿರುದ್ಧ ಬೆಂಗಳೂರು ಜಯ

ಅಬುಧಾಬಿ : ಇಲ್ಲಿನ ಶೇಖ್‌ ಜಾಹೇದ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 15ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಆರ್​ಸಿಬಿ ಭರ್ಜರಿ ಗೆಲುವು ಸಾಧಿಸಿದೆ.
ಬೆಂಗಳೂರು ತಂಡ 8 ವಿಕೆಟ್​ಗಳ ಜಯದೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 154 ರನ್ ಹೊಡೆಯಿತು.
ನಂತರದ ಇನ್ನಿಂಗ್ಸ್ ನಲ್ಲಿ ಆರ್​ಸಿಬಿ ಆರಂಭದಲ್ಲೇ ಆ್ಯರೋನ್ ಫಿಂಚ್(8) ವಿಕೆಟ್ ಕಳೆದುಕೊಂಡಿತು. ಆದರೆ, ನಂತರ ಶುರುವಾಗಿದ್ದು, ದೇವದತ್ ಪಡಿಕ್ಕಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಜೋಡಿಯ ಆಟ.
ಪಡಿಕ್ಕಲ್ ಬಿರುಸಿನ ಬ್ಯಾಟಿಂಗ್ ನಡೆಸಿದರೆ ಕಿಂಗ್ ಕೊಹ್ಲಿ ಅತ್ಯುತ್ತಮ ಸಾತ್ ನೀಡಿದರು. ಈ ಇಬ್ಬರ ಜೊತೆಯಾಟ ತಂಡದ ಗೆಲುವು ಸಾಧಿಸುವಲ್ಲಿ ಸಫಲವಾಯಿತು. 99 ರನ್​ಗಳ ಜೊತೆಯಾಟ ಆಡಿತು.
ಪಡಿಕ್ಕಲ್ 53 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಬಾರಿಸಿ 63 ರನ್ ಚಚ್ಚಿದರೆ, ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಿಡಿಸಿ ಅಜೇಯ 75 ರನ್ ಗಳಿಸಿದರು. ಆರ್​ಸಿಬಿ 19.1 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 158 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು. ರಾಜಸ್ಥಾನ್ ಪರ ಶ್ರೇಯಸ್ ಗೋಪಾಲ್ ಹಾಗೂ ಜೋಫ್ರಾ ಆರ್ಚರ್ ತಲಾ 1 ವಿಕೆಟ್ ಪಡೆದರು.
8 ವಿಕೆಟ್​ಗಳ ಬೊಂಬಾಟ್ ಜಯದೊಂದಿಗೆ ಆರ್​ಸಿಬಿ ತಂಡ ಐಪಿಎಲ್ 2020 ರಲ್ಲಿ 6 ಅಂಕ ಸಂಪಾದಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...