Wednesday, April 10, 2024

ಐಪಿಎಲ್ 2020 : ಡೆಲ್ಲಿ ಕ್ಯಾಪಿಟಲ್ಸ್ ಗೆ 59 ರನ್ ಗಳ ಗೆಲುವು

ಅಬುಧಾಬಿ : ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 13ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ಆರ್ ಸಿಬಿ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದೆ.
ಟಾಸ್ ಗೆದ್ದ ಆರ್ ಸಿಬಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಯಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಇಪ್ಪತ್ತು ಓವರ್ ಗಳಲ್ಲಿ ನಾಲ್ಕು ವಿಕೆಟ್ ಗಳ ನಷ್ಟಕ್ಕೆ 196 ರನ್ ಗಳಿಸಿತು. ಡೆಲ್ಲಿ ಪರ ಪೃಥ್ವಿ ಶಾ 42, ಧವನ್ 32, ಶ್ರೇಯಸ್ ಐಯ್ಯರ್ 11, ಪಂತ್ 37, ಸ್ಟೋನಿಸ್ 53 ರನ್ ಗಳನ್ನು ಸಿಡಿಸಿದರು.
ಇನ್ನು ಡೆಲ್ಲಿ ನೀಡಿದ ಗುರಿ ಬೆನ್ನತ್ತಿದ ಆರ್ ಸಿಬಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಡೆಲ್ಲಿ ದಾಳಿಗೆ ಆರಂಭಿಕರು ಬೇಗನೆ ಫೆವೀಲಿಯನ್ ನತ್ತ ಹೆಜ್ಜೆ ಹಾಕಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ತಂಡಕ್ಕೆ ಅನಿವಾರ್ಯಯವಾಯಿತು. ನಾಯಕ 43 ರನ್ ಗಳನ್ನು ಸಿಡಿಸಿ ಭರವಸೆ ಮೂಡಿಸಿದರಾದರೂ ಗೆಲ್ಲಲು ಸಾಧ್ಯವಾಗಲಿಲ್ಲ. 20 ಓವರ್ ಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಳೆದುಕೊಂಡ ಆರ್ ಸಿ ಬಿ 137 ರನ್ ಗಳನ್ನಷ್ಟೇ ಗಳಿಸಿತು. 59 ರನ್ ಗಳಿಂದ ಸೋಲೊಪ್ಪಿಕೊಂಡಿತು. ಭರವಸೆ ಮೂಡಿಸಿದ್ದ ಆಟಗಾರ ದೇವದತ್ತ್ ಪಡಿಕ್ಕಲ್ ನಾಲ್ಕು, ಆರನ್ ಫಿಂಚ್ 13, ಎಬಿಡಿವಿಲಿಯರ್ಸ್ 9, ಮೊಯಿನ್ ಅಲಿ 11 ಹೀಗೆ ಬೇಗನೆ ಫೆವೀಲಿಯನ್ ಹಾದಿ ಹಿಡಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...