Saturday, April 6, 2024

ಮಾಸ್ಕ್ ಧರಿಸದೇ ಇದ್ದರೇ ದಂಡ: ನಗರ ಪ್ರದೇಶದಲ್ಲಿ ರೂ.250, ಗ್ರಾಮೀಣ ಪ್ರದೇಶದಲ್ಲಿ ರೂ.100 ದಂಡ: ಸಿಎಂ ಆದೇಶ

ಬೆಂಗಳೂರು : ಕಳೆದ ಮೂರು ದಿನಗಳ ಹಿಂದೆ ರಾಜ್ಯ ಸರ್ಕಾರ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸದೇ ಇದ್ದರೇ ಭಾರೀ ಮೊತ್ತದ ದಂಡ ವಿಧಿಸುವ ಬಗ್ಗೆ ಆದೇಶಿಸಿತ್ತು. ಇದನ್ನು ಅಧಿಕೃತವಾಗಿಯೂ ರಾಜ್ಯ ಸರ್ಕಾರ ಜಾರಿ ಮಾಡಿತ್ತು. ನಗರ ಪ್ರದೇಶದಲ್ಲಿ ರೂ.1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ಹಾಕಲಾಗುತ್ತದೆ ಎಂದು ತಿಳಿಸಲಾಗಿತ್ತು.
ಆದರೆ ದುಬಾರಿ ದಂಡದಿಂದಾಗಿ ರಾಜ್ಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಸಿಕ್ಕಿಬಿದ್ದರೇ ರೂ.1000 ದಂಡದ ಮೊತ್ತವನ್ನು ರೂ.250ಕ್ಕೆ, ಗ್ರಾಮೀಣ ಪ್ರದೇಶದಲ್ಲಿನ ರೂ.500 ಮೊತ್ತವನ್ನು ರೂ.100ಕ್ಕೆ ಇಳಿಕೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.


ಈ ಬಗ್ಗೆ ಸಿ.ಎಂ. ಬಿ.ಎಸ್.ವೈ ಪ್ರಕಟಣೆ ಹೊರಡಿಸಿದ್ದು, ಇತ್ತೀಚೆಗೆ ರಾಜ್ಯ ಸರ್ಕಾರವು ನಗರ ಪ್ರದೇಶದಲ್ಲಿ ಮಾಸ್ಕ್ ಬಳಸದಿದ್ದರೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ವಿಧಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನಲೆಯಲ್ಲಿ ದಂಡದ ಪ್ರಮಾಣದಲ್ಲಿ ನಗರ ಪ್ರದೇಶದಲ್ಲಿ ರೂ.1000 ದಿಂದ ರೂ.250 ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500ರಿಂದ ರೂ.100ಕ್ಕೆ ಇಳಿಸಲು ತೀರ್ಮಾನಿಸಲಾಗಿರುತ್ತದೆ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...