Saturday, October 28, 2023

ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್ ಧರಿಸದೇ ಸಿಕ್ಕಿಬಿದ್ರೆ ದಂಡ ಕಡ್ಡಾಯ

Must read

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮವನ್ನು ಕೈಗೊಂಡಿರುವ ಸರ್ಕಾರ, ಮಾಸ್ಕ್ ಧರಿಸುವ ಕಡ್ಡಾಯ ನಿಯಮವನ್ನು ಮತ್ತಷ್ಟು ಬಿಗಿ ಗೊಳಿಸಿದೆ. ಮಾಸ್ಕ್ ಅನ್ನು ಧರಿಸದೇ ನಗರ ಪ್ರದೇಶದಲ್ಲಿ ಓಡಾಡಿದ್ರೆ ರೂ.1000 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದವರಿಗೆ ರೂ.500 ದಂಡವನ್ನು ವಿಧಿಸುವ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಸ್ಕ್ ಧರಿಸದವರಿಗೆ ದಂಡ ಶುಲ್ಕವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ ರೂ.1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುವ ಜನರಿಗೆ ರೂ.500 ದಂಡವನ್ನು ವಿಧಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
ಅಂಗಡಿ ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಗೊಳ್ಳೋದು ಕಡ್ಡಾಯವಾಗಿದೆ. ಅಂಗಡಿ ಮುಂಗಟ್ಟುಗಳ ಬಳಿ ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು. ಅಂತರ ಕಾಯ್ದುಕೊಳ್ಳದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

More articles

Latest article