Saturday, April 6, 2024

ಕ್ಷೇತ್ರದಲ್ಲಿ ನಿರಂತರವಾಗಿ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದ್ದು, 95ಶೇ. ವಿತರಣೆ ಪೂರ್ಣಗೊಂಡಿದೆ: ರಾಜೇಶ್ ನಾಯ್ಕ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಇಂದು (ಅ.8) ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿಯಲ್ಲಿ ಬಂಟ್ವಾಳ ಕ್ಷೇತ್ರದ 73 ಮಂದಿ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದರು.


ಬಳಿಕ ಮಾತನಾಡಿದ ಅವರು, ಬಂಟ್ವಾಳ ಕ್ಷೇತ್ರದಲ್ಲಿ ನಿರಂತರವಾಗಿ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದ್ದು, ಈಗಾಗಲೇ 95 ಶೇ. ವಿತರಣೆ ಪೂರ್ಣಗೊಂಡಿದೆ. ಮನೆ ಇದ್ದರೂ, ಹಕ್ಕುಪತ್ರ ಇಲ್ಲದೇ ಇದ್ದಾಗ ಸರಕಾರಿ ಸೌಲಭ್ಯ ಹಾಗೂ ಬ್ಯಾಂಕ್ ಸಾಲ ಪಡೆಯುವುದು ಕಷ್ಟವಾಗಿದ್ದು, ಹಕ್ಕುಪತ್ರ ಸಿಕ್ಕಿದಾಗ ದಾಖಲೆಯ ಜತೆ ಸೌಲಭ್ಯಗಳನ್ನೂ ಪಡೆಯಲು ಸಹಕಾರಿಯಾಗುತ್ತದೆ ಎಂದರು.


ತಾ.ಪಂ.ಸದಸ್ಯರಾದ ಪ್ರಭಾಕರ ಪ್ರಭು, ಯಶವಂತ ಪೊಳಲಿ, ಕಂದಾಯ ನಿರೀಕ್ಷಕರಾದ ನವೀನ್ ಬೆಂಜನಪದವು, ದಿವಾಕರ ಮುಗುಳಿಯ, ಗ್ರಾಮ ಕರಣಿಕರಾದ ಜನಾರ್ದನ ಜೆ., ರಾಜು, ಪ್ರಶಾಂತ್, ಕರಿಬಸಪ್ಪ, ವೈಶಾಲಿ, ಶಿಲ್ಪಾ, ಅನಿಲ್, ಆಶಾ ಮೆಹಂದಲೆ, ಲಿಂಗಪ್ಪ ಜಜ್ಲುಂಬಿ ಉಪಸ್ಥಿತರಿದ್ದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...