Wednesday, April 10, 2024

ಕಾರ್ಯಕರ್ತರು ಬಲಿಷ್ಠರಾಗಬೇಕಾದರೆ ಪಕ್ಷ ಅಧಿಕಾರಕ್ಕೆ ಬರಬೇಕು: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮನೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಕುಟುಂಬದ ಸದಸ್ಯರು ಪಾಲ್ಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು “ಕುಟುಂಬ ಮಿಲನ” ಕಾರ್ಯಕ್ರಮದಲ್ಲಿ ಜೊತೆಗೂಡಿ ಭಾರತೀಯ ಜನತಾ ಪಕ್ಷವನ್ನು ಬಲಪಡಿಸಿ. ಕಾರ್ಯಕರ್ತರು ಬಲಿಷ್ಠರಾಗಬೇಕಾದರೆ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.


ಅವರು ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಂಗಬೆಟ್ಟು ಮಹಾಶಕ್ತಿ ಕೇಂದ್ರ ರಾಯಿ ಗ್ರಾಮ ಇದರ ಸಂಯುಕ್ತ ಆಶ್ರಯದಲ್ಲಿ ಪಿಲ್ಕಾಜೆಗುತ್ತಿನಲ್ಲಿ ನಡೆದ ಕುಟುಂಬ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾ.ಪಂ.ಪಂಚಾಯತ್ ನಿಂದ ಕೇಂದ್ರದವರೆಗೆ ಪಕ್ಷ ಅಧಿಕಾರಕ್ಕೆ ಬಂದರೆ ಈ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಮೋದಿಯವರ ಬಲಿಷ್ಠ ನಾಯಕತ್ವದಿಂದ ಭಾರತ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು.

ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿ ಡೊಂಬಯ್ಯ ಅರಳ, ಬಂಟ್ವಾಳ ಕ್ಷೇತ್ರದ ಚುನಾವಣಾ ಪ್ರಭಾರಿ ದೇವದಾಸ ಶೆಟ್ಟಿ, ಸಹ ಪ್ರಭಾರಿ ಪ್ರಭಾಕರ ಪ್ರಭು, ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೀತರಾಮ ಪೂಜಾರಿ, ಎ.ಪಿ‌.ಎಮ್.ಸಿ.ಸದಸ್ಯ ವಸಂತ ಅಣ್ಣಳಿಕೆ ಉಪಸ್ಥಿತರಿದ್ದರು.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....