Wednesday, April 10, 2024

ಫಲಾನುಭವಿಗಳಿಗೆ ಮಿನಿ ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಇಂದು ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಆವರಣದಲ್ಲಿ 2020-21ನೇ ಸಾಲಿನ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ನೀಡಲಾದ ಮಿನಿ ಟ್ಯಾಕ್ಟರ್ ಹಾಗೂ ಪವರ್ ಟಿಲ್ಲರನ್ನು ಫಲಾನುಭವಿಗಳಿಗೆ ವಿತರಿಸಿದರು.

ಇರ್ವತ್ತೂರು ಗ್ರಾಮ ನಿವಾಸಿ ನಿರಂಜನ್‌ಕುಮಾರ್ ಅವರಿಗೆ ಮಿನಿ ಟ್ಯಾಕ್ಟರ್ ಹಾಗೂ ಬಿಳಿಯೂರು ಗ್ರಾಮ ನಿವಾಸಿ ವೆಂಕಪ್ಪ ನಾಯ್ಕ ಅವರಿಗೆ ಪವರ್ ಟಿಲ್ಲರ್ ವಿತರಿಸಲಾಯಿತು. ಇದರಲ್ಲಿ ಟ್ಯಾಕ್ಟರ್‌ಗೆ 75 ಸಾವಿರ ರೂ. ಹಾಗೂ ಟಿಲ್ಲರ್‌ಗೆ 1 ಲಕ್ಷ ರೂ.ಸರಕಾರದ ಸಹಾಯಧನ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಹಾಗೂ ಸಿಬಂದಿ ಉಪಸ್ಥಿತರಿದ್ದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...