Friday, April 5, 2024

ಕ್ಷೇತ್ರದ 39 ಗ್ರಾಮ ಪಂಚಾಯತ್ ಅನ್ನು ಗೆಲ್ಲಿಸಿ ಕೊಡುವ ಸಂಕಲ್ಪ ಮಾಡಿ: ಶಾಸಕ ರಾಜೇಶ್ ನಾಯ್ಕ್ ಕರೆ

ಬಂಟ್ವಾಳ : ಕ್ಷೇತ್ರದ ಬಿ.ಜೆ.ಪಿ. ಯ ವಿಶೇಷ ಕಾರ್ಯಯಕಾರಣಿ ಸಭೆಯು ಗೀತಾಂಜಲಿ ಸಭಾ ಭವನದಲ್ಲಿ ಜರಗಿತು. ಕಾರ್‍ಯಕಾರಣಿಯನ್ನು ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉದ್ಛಾಟಿಸಿದರು.

ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿ ಕೇತ್ರದ 39 ಗ್ರಾಮ ಪಂಚಾಯತ್‌ನಲ್ಲಿ 39 ಅನ್ನು ಗೆಲ್ಲಿಸಿ ಕೊಡುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಕೆಲಸ ಮಾಡಿ ಎಂದು ಕರೆ ನೀಡಿದರು. ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಿ ಕ್ಷೇತ್ರದಲ್ಲಿ ಈಗಾಗಲೇ ಕೋಟ್ಯಾಂತರ ಅನುದಾನ ರಸ್ತೆ ಇನ್ನಿತರ ಅಭಿವೃದ್ಧಿ ಕೆಲಸಗಳು ನಡೆದಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ವಹಿಸಿದ್ದರು. ಸಭೆಯಲ್ಲಿ ಕ್ಷೇತ್ರ ಉಸ್ತುವಾರಿ ಜಿಲ್ಲಾ ಪ್ರ.ಕಾರ್ಯದರ್ಶಿ ಸುಧೀರ್ ಶೆಟ್ಟಿ, ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪ್ರ.ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ್, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕರ್ನಾಟಕ ರಾಜ್ಯದ ನೀರು ಸರಬರಾಜು ಮತ್ತು ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನಾ ಜಿ.ಕೆ. ಭಟ್ ಇವರನ್ನು ಅಭಿನಂದಿಸಲಾಯಿತು.

ಕ್ಷೇತ್ರ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರ ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ವಂದಿಸಿದರು. ಕಾರ್ಯಕ್ರಮ ನಿರೂಪಣೆ ಡೊಂಬಯ ಅರಳ ನಿರ್ವಹಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...