Monday, April 8, 2024

’ಅಧ್ಯಾತ್ಮಿಕತೆಯಿಂದ ಆನಂದ ಪ್ರಾಪ್ತಿ’ : ಒಡಿಯೂರುಶ್ರೀ

ವಿಟ್ಲ: ಅಧ್ಯಾತ್ಮಿಕತೆಯಿಂದ ಆರೋಗ್ಯಪೂರ್ಣ ಬದುಕು ನಿರ್ಮಾಣಗೊಳ್ಳುತ್ತದೆ. ಎಲ್ಲಾ ರೋಗಗಳಿಗೆ ಔಷಧಿ ಅಧ್ಯಾತ್ಮದಲ್ಲಿದ್ದು, ನಿಜವಾದ ಆನಂದ ಅಧ್ಯಾತ್ಮದಲ್ಲೇ ಅಡಕವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಮಂಗಳವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆದ ಶ್ರೀ ಲಲಿತಾ ಪಂಚಮಿ ಮಹೋತ್ಸವ – ಶ್ರೀ ಚಂಡಿಕಾಯಾಗ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ನಮ್ಮಲ್ಲಿ ಮನಸ್ಸಿನ ವ್ಯಾಪಾರ ನಡೆಯುತ್ತದೆ ಹೊರತು ಅಧ್ಯಾತ್ಮಿಕ ದೃಷ್ಟಿಯ ಚಟುವಟಿಕೆಗಳು ನಡೆಯುತ್ತಿಲ್ಲ. ಅಧ್ಯಾತ್ಮದ ದೃಷ್ಟಿ ಇಲ್ಲದೇ ಬದುಕು ಬದುಕಾಗಲು ಸಾಧ್ಯವಿಲ್ಲ. ಅಂಧಾಕಾರದಲ್ಲಿ ಬದುಕು ಕೂಡಿರಬಾರದು. ಬೆಳಕಿನಿಂದ ಕೂಡಿದ ಬದುಕು ಅರ್ಥಪೂರ್ಣ ಬದುಕು ಆಗುತ್ತದೆ. ಆಹಾರದಲ್ಲಿ ಇತಿಮಿತಿ ಇರಬೇಕು. ಇದು ಉತ್ತಮ ಆರೋಗ್ಯವನ್ನು ನೀಡುತ್ತದೆ. ಕೊರೊನಾ ಮಹಾಮಾರಿ ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ತಿಳಿಸಿದೆ. ಕೈಕುಳುಕುವ ಬದಲು ಕೈ ಮುಗಿಯುವ ಸಂಸ್ಕೃತಿ ಬಂದಿದೆ. ಪಾಶ್ಚಂತ್ಯ ಜನರು ಕೂಡಾ ಅದನ್ನು ಅನುಕರುಣೆ ಮಾಡುತ್ತಿದ್ದಾರೆ. ನಿಯಮ ಪಾಲನೆ ಅಗತ್ಯ. ಜೀವನದಲ್ಲಿ ಎಚ್ಚರ ತಪ್ಪಿದರೆ ಅನಾಹುತ ಹೆಚ್ಚಾಗುತ್ತದೆ ಎಂದು ಹೇಳಿದರು.
ಸಾಧ್ವೀ ಮಾತಾನಂದಮಯೀ ದಿವ್ಯ ಸಾನಿಧ್ಯ ಕರುಣಿಸಿದ್ದರು. ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಬೆಳಿಗ್ಗೆ ಮಂಗಳಾರತಿಯ ಬಳಿಕ ಶ್ರೀ ನಾಗದೇವರಿಗೆ ನಾಗತಂಬಿಲ, ಶ್ರೀ ಚಂಡಿಕಾ ಯಾಗವು ಆರಂಭಗೊಂಡು ಮಧ್ಯಾಹ್ನ ಗಂಟೆ ೧೨.೦೦ಕ್ಕೆ ಯಾಗದ ಪೂರ್ಣಾಹುತಿ, ಮಹಾಮಂಗಳಾರತಿ, ಆರಾಧ್ಯದೇವರಿಗೆ ಮಹಾಪೂಜೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಡಿ. ಮನೋಹರಕುಮಾರ್ ಯಕ್ಷಬಳಗ, ಮಂಗಳೂರು ಇವರಿಂದ ’ಶಾಂಭವಿ ವಿಜಯ’ ತುಳು ಯಕ್ಷಗಾನ ಬಯಲಾಟ. ರಾತ್ರಿ ಅಷ್ಟಾವಧಾನ ಸೇವೆ, ಮಹಾಪೂಜೆ ನಡೆಯಿತು.

 

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...