Tuesday, April 9, 2024

ಒಡಿಯೂರು ಶ್ರೀ ಸಂಸ್ಥಾನಕ್ಕೆ ಶ್ರೀಮದ್ ಎಡನೀರು ಮಠದ ನೂತನ ಪೀಠಾಧಿಪತಿ ಭೇಟಿ

ವಿಟ್ಲ: ಜಗದ್ಗುರು ಶ್ರೀ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಶ್ರೀ ಮದ್ ಎಡನೀರು ಮಠದ ನೂತನ ಪೀಠಾಧಿಪತಿಗಳಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ (ಶ್ರೀ ಜಯರಾಮ ಮಂಜತ್ತಾಯ)ಯವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಶ್ರೀ ದತ್ತಾಂಜನೇಯ ದೇವರ ಹಾಗೂ ಶ್ರೀ ನಿತ್ಯಾನಂದ ಗುಹಾಲಯದಲ್ಲಿ ಶ್ರೀ ಪಂಚಮುಖಿ ಆಂಜನೇಯ ದೇವರ ದರ್ಶನ ಪಡೆದರು. ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರು ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಶುಭಹಾರೈಸಿದರು.


ವೇ|ಬ್ರಹ್ಮಶ್ರೀ| ರವೀಶ ತಂತ್ರಿ ಕುಂಟಾರು, ಶ್ರೀ ಎಡನೀರು ಮಠದ ಪುರೋಹಿತರಾದ ಶ್ರೀ ಗೋಪಾಲಕೃಷ್ಣ ಅಡಿಗ ಉಪಸ್ಥಿತರಿದ್ದರು. ಒಡಿಯೂರು ಶ್ರೀ ಸಂಸ್ಥಾನದ ಪುರೋಹಿತರಾದ ವೇ|ಮೂ| ಚಂದ್ರಶೇಖರ ಉಪಾಧ್ಯಾಯ ಹಾಗೂ ವೈದಿಕ ವೃಂದ, ಸಹಸಂಸ್ಥೆಗಳ ಪ್ರಮುಖರಾದ ಶ್ರೀ ಎ. ಸುರೇಶ್ ರೈ, ಶ್ರೀ ಎ. ಅಶೋಕ್ ಕುಮಾರ್, ಶ್ರೀಮತಿ ಸರ್ವಾಣಿ ಪಿ. ಶೆಟ್ಟಿ, ಶ್ರೀ ಪಿ. ಲಿಂಗಪ್ಪ ಗೌಡ, ಶ್ರೀ ಮಲಾರು ಜಯರಾಮ ರೈ, ಶ್ರೀ ಗಣಪತಿ ಭಟ್ ಸೇರಾಜೆ, ಶ್ರೀ ಯಶವಂತ ವಿಟ್ಲ, ಶ್ರೀ ಸುಬ್ರಹ್ಮಣ್ಯ ಒಡಿಯೂರು, ಶ್ರೀ ಶಶಿಧರ ಶೆಟ್ಟಿ ಜಮ್ಮದಮನೆ ಇವರುಗಳು ಬರಮಾಡಿಕೊಂಡರು.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...