Monday, April 8, 2024

ಒಡಿಯೂರು ಶ್ರೀಗಳ ಷಷ್ಠ್ಯಬ್ದಿ ಸಂಭ್ರಮ

 

ವಿಟ್ಲ: ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ 60ರ ಸಂಭ್ರಮದ ಅಂಗವಾಗಿ ನಮ್ಮ ಕುಡ್ಲ ಟಿ.ವಿ. ವಾಹಿನಿ ನಿರಂತರ 60 ದಿನಗಳ ’ಗುರುದೇವಾಮೃತ’ ಜ್ಞಾನವಾಹಿನಿ ಆಧ್ಯಾತ್ಮಿಕ ಚಿಂತನಾಸತ್ರ ಪ್ರಸಾರ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅದರ ಚಿತ್ರೀಕರಣಕ್ಕೆ ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಪೂಜ್ಯ ಶ್ರೀಗಳವರು ದೀಪ ಪ್ರಜ್ವಲನಗೊಳಿಸಿ ಚಾಲನೆ ನೀಡಿದರು.
ಸಾಧ್ವಿ ಶ್ರೀ ಮಾತಾನಂದಮಯೀ, ಒಡಿಯೂರು ಶ್ರೀಗಳ ಷಷ್ಠ್ಯಬ್ದಿ ಸಂಭ್ರಮ ಸಮಿತಿಯ ಅಧ್ಯಕ್ಷ ಮೂಡುಬಿದ್ರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿಯವರು ಶುಭ ಹಾರೈಸಿದರು.

ಸಮಿತಿಯ ಕೋಶಾಧಿಕಾರಿ ಎ. ಸುರೇಶ್ ರೈ, ಜತೆ ಕೋಶಾಧಿಕಾರಿಗಳಾದ ಎ. ಅಶೋಕ್ ಕುಮಾರ್, ಪಿ. ಲಿಂಗಪ್ಪ ಗೌಡ, ಬಿ.ಸಿ. ರೋಡ್ ರಂಗೋಲಿಯ ಮಾಲಕ ಚಂದ್ರಹಾಸ ಡಿ. ಶೆಟ್ಟಿ, ಗಣಪತಿ ಭಟ್ ಸೇರಾಜೆ, ಯಶವಂತ ವಿಟ್ಲ, ವೇಣುಗೋಪಾಲ ಮಾರ್ಲ, ಎ. ಜಯಪ್ರಕಾಶ್ ಶೆಟ್ಟಿ, ಪದ್ಮನಾಭ ಒಡಿಯೂರು ಮೊದಲಾದವರು ಉಪಸ್ಥಿತರಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ನವನೀತ ಶೆಟ್ಟಿ ಕದ್ರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಾಹಿನಿಯಲ್ಲಿ ಶ್ರೀಗಳು ಆಧ್ಯಾತ್ಮಿಕ ಚಿಂತನೆಗಳ ದಿವ್ಯೋಪನ್ಯಾಸ ನೀಡುವರು. ಸಾಧ್ವಿ ಶ್ರೀ ಮಾತಾನಂದಮಯೀ ಅವರು ವಚನ ಸಾಹಿತ್ಯವನ್ನು ವಾಚಿಸುವರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...