Monday, April 15, 2024

ಪಾಣೆಮಂಗಳೂರು ನದಿಗೆ ಹಾರಿದಾತನ ರಕ್ಷಣೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ್ನು ಗೂಡಿನ ಬಳಿಯ ಮಹಮ್ಮದ್ ಮತ್ತವರ ತಂಡ ರಕ್ಷಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮೂಲತಃ ಹಾಸನ ಜಿಲ್ಲೆಯ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್ ಸೇತುವೆಯ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಇದನ್ನು ನೋಡಿದ ಸ್ಥಳೀಯರು ಈಜುಗಾರ ಮಹಮ್ಮದ್ ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ದೋಣಿಯ ಮೂಲಕ ತೆರಳಿದ ಮಹಮ್ಮದ್ ಯುವಕನನ್ನು ನೀರಿನಿಂದ ಮೇಲೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ. ಮಹಮ್ಮದ್ ಅವರ ಈ ಕಾರ್ಯಚರಣೆಯಲ್ಲಿ ಶಿಹಾಬ್ ಮತ್ತು ಸ್ವಾಲಿ ಕೂಡ ಸಾಥ್ ನೀಡಿದ್ದಾರೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...