Wednesday, April 17, 2024

ಪೆರಾಜೆ ಶ್ರೀ ದೇವಿ ಭಜನಾ ಮಂದಿರದಲ್ಲಿ ಅ.31 ದಿಂದ ನ. 07 ರವರೆಗೆ ಭಜನಾ ತರಬೇತಿ ಶಿಬಿರ

ಬಂಟ್ವಾಳ: ಪೆರಾಜೆ ಶ್ರೀ ದೇವಿ ಭಜನಾ ಮಂದಿರದಲ್ಲಿ ಅ.31 ದಿಂದ ನ. 07 ರವರೆಗೆ ಭಜನಾ ತರಬೇತಿ ಶಿಬಿರ ನಡೆಯಲಿದ್ದು ಪೆರಾಜೆ ಗ್ರಾಮದ ಆಸಕ್ತ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಲು ಭಜನಾ ಮಂದಿರದ ಅಧ್ಯಕ್ಷ ಯತಿರಾಜ್ ಮಿತ್ತಪೆರಾಜೆ ತಿಳಿಸಿದ್ದಾರೆ.

ಆಧುನಿಕ ಜಗತ್ತಿನ ಜೀವನಶೈಲಿ, ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಮುಂದಿನ ಪೀಳಿಗೆ ದೇವರನ್ನು ಮರೆಯುವ ಸಮಯ ದೂರವಿಲ್ಲ. ದೇವರನ್ನು ಮರೆತ ಮಕ್ಕಳು ಮುಂದಿನ ದಿನಗಳಲ್ಲಿ ತಂದೆ ತಾಯಿ ಬಂಧು ಬಳಗ ಎಲ್ಲರನ್ನೂ ಮರೆತರೆ ಅಚ್ಚರಿಯಿಲ್ಲ.
ಈ ಎಲ್ಲಾ ಸಂಘರ್ಷ ದ ನಡುವೆ ಕೆಟ್ಟ ಚಟಗಳಿಂದ ಮಕ್ಕಳನ್ನು ದೂರ ಇಡಬೇಕಾದರೆ ದೇವರ ನಾಮಸ್ಮರಣೆ ಒಂದೇ ದಾರಿ ಎಂಬ ಸಂಕಲ್ಪವನ್ನು ಮಾಡಿಕೊಂಡು ಆ ಹಿನ್ನೆಲೆಯಲ್ಲಿ ಶ್ರೀ ದೇವಿ ಭಜನಾ ಮಂದಿರ ಪೆರಾಜೆ ಇದರ ವತಿಯಿಂದ ಪೆರಾಜೆ ಗ್ರಾಮದ ಆಸಕ್ತ ಸಣ್ಣ ಮಕ್ಕಳಿಗಾಗಿ ಒಂದು ವಾರದ ಭಜನಾ ತರಬೇತಿ ಮಂದಿರದಲ್ಲಿ ನಡೆಯಲು ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಭಜನಾ ಮಂಡಳಿ ಆಧ್ಯಕ್ಷ ಯತಿರಾಜ್ ಮಿತ್ತ ಪೆರಾಜೆ ತಿಳಿಸಿದ್ದಾರೆ.

ಅಕ್ಟೋಬರ್ 31 ಶನಿವಾರದಿಂದ ನ. 07 ವರೆಗೆ ಪ್ರತಿದಿನ ಸಂಜೆ 7 ಗಂಟೆಯಿಂದ 8 ಗಂಟೆ ವರೆಗೆ ಭಜನಾ ತರಬೇತಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ಈ ತರಬೇತಿ ಶಿಬಿರಕ್ಕೆ ಕಳುಹಿಸಿ ಕೊಡಬೇಕಾಗಿ ವಿನಂತಿಯನ್ನು ಶ್ರೀದೇವಿ ಭಜನಾಮಂದಿರದ ಪರವಾಗಿ ಅವರು ಮನವಿ ಮಾಡಿಕೊಂಡಿದ್ದಾರೆ.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...