Sunday, April 7, 2024

ವಿಟ್ಲ: ಪೋಷಣ್ ಮಾಸಾಚರಣೆ ಸಮಾರೋಪ

ವಿಟ್ಲ: ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪೋಷಣ್ ಅಭಿಯಾನ ಕಾರ್‍ಯಕ್ರಮದಡಿ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಪಟ್ಟಣ ಪಂಚಾಯತ್ ದಮಯಂತಿ ವಹಿಸಿದ್ದರು. ಪಟ್ಟಣ ಪಂಚಾಯತ್‌ನ ಸದಸ್ಯರುಗಳಾದ ಉಷಾ ಕೃಷ್ಣಪ್ಪ, ಚಂದ್ರಕಾಂತಿ ಶೆಟ್ಟಿ, ಸುನೀತ, ಅಶೋಕ್ ಕುಮಾರ್ ಶೆಟ್ಟಿ, ಮಹಿಳಾ ಮಂಡಲದ ಕಾರ್‍ಯದರ್ಶಿ, ಧರ್ಮಾವತಿ, ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಸುಧಾ ಹಾಗೂ ಕಾರ್‍ಯದರ್ಶಿ ಗೀತಾ ಜಯತೀರ್ಥ, ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಮಾಲಿನಿ ಉಪಸ್ಥಿತರಿದ್ದರು.


ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಶಿ ಪೋಷಣ್ ಅಭಿಯಾನ್ ಹಾಗೂ ಪೋಷಣ್ ಮಾಸಾಚರಣೆ ಕುರಿತು ಪ್ರಸ್ತಾವಿಸಿದರು. ಇದೇ ಸಂದರ್ಭದಲ್ಲಿ ಕುಂಠಿತ ಬೆಳವಣಿಗೆಯನ್ನು ಗುರುತಿಸುವಿಕೆ, ಹಾಗೂ ಪೌಷ್ಟಿಕ ತೋಟ ರಚನೆ ಕುರಿತು ಎಲ್ಲಾ ವಲಯಗಳಿಂದ ಒಬ್ಬ ಕಾರ್‍ಯಕರ್ತೆಯರನ್ನು ಗುರುತಿಸಿ ಗೌರವಿಸಲಾಯಿತು. ವಿವಿಧ ಬಗೆಯ ಪೌಷ್ಟಿಕ ಖಾದ್ಯಗಳನ್ನು ಪ್ರದರ್ಶಿಸಲಾಯಿತು.
ಮೇಲ್ವಿಚಾರಕಿ ಗುಣವತಿ ಸ್ವಾಗತಿಸಿದರು. ಪೋಷಣ್ ಅಭಿಯಾನದ ಸಂಯೋಜಕಿ ವಿನಿತ ವಂದಿಸಿದರು. ರೋಹಿಣಿ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...