Sunday, April 14, 2024

ಹತ್ರಾಸ್ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಉತ್ತರ ಪ್ರದೇಶ ಹತ್ರಾಸ್‌ನಲ್ಲಿ ನಡೆದ ಯುವತಿಯ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಬಂಟ್ವಾಳ ತಾಲೂಕು ಅಂಬೇಡ್ಕರ್ ಯುವ ವೇದಿಕೆಯ ವತಿಯಿಂದ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಅ.7ರಂದು ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಅತ್ಯಾಚಾರವನ್ನು ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಸರಕಾರ ಅತ್ಯಾಚಾರ ಪ್ರಕರಣವನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮಹಮ್ಮದ್, ಶೇಖರ್ ಕುಕ್ಕೇಡಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ಎಂ.ಚಂದ್ರಶೇಖರ್ ಪೂಜಾರಿ, ರಾಮಣ್ಣ ವಿಟ್ಲ, ಭಾನುಚಂದ್ರ ಕೃಷ್ಣಾಪುರ, ಜನಾರ್ದನ ಚಂಡ್ತಿಮಾರ್, ರಾಜಾ ಚಂಡ್ತಿಮಾರ್, ಹಾರೂನ್ ರಶೀದ್, ಮಧುಸೂದನ್ ಶೆಣೈ, ಮಹಮ್ಮದ್ ನಂದಾವರ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ವೆಂಕಪ್ಪ ಪೂಜಾರಿ, ಸಂಪತ್‌ಕುಮಾರ್ ಶೆಟ್ಟಿ, ಪ್ರಕಾಶ್ ಬಿ.ಶೆಟ್ಟಿ ತುಂಬೆ, ಪ್ರೀತಿರಾಜ್ ದ್ರಾವಿಡ್, ಪ್ರವೀಣ್ ಸೂರ್ಯ ಹೊಸಂಗಡಿ, ಶ್ರೀನಿವಾಸ್ ಮಿಜಾರ್, ಯೋಗೀತಾ ಸುವರ್ಣ ತಲಪಾಡಿ, ಭಾರತಿ, ಸುರೇಂದ್ರ ಕೋಟ್ಯಾನ್, ತುಳಸೀದಾಸ್ ವಿಟ್ಲ, ಪದ್ಮನಾಭ ನರಿಂಗಾನ ಮೊದಲಾದವರಿದ್ದರು.
ಪ್ರೇಮ್‌ರಾಜ್ ದ್ರಾವಿಡ್ ಅವರು ರಾಷ್ಟçಪತಿಗಳಿಗೆ ನೀಡುವ ಮನವಿಯನ್ನು ಓದಿದರು. ಮುಂದಾಳು ರಾಜಾ ಪಲ್ಲಮಜಲು ಅವರು ಸ್ವಾಗತಿಸಿದರು. ಸತೀಶ್ ಅರಳ ಕಾರ್ಯಕ್ರಮ ನಿರ್ವಹಿಸಿದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...