Monday, April 15, 2024

ಮಾಣಿ ಗ್ರಾ.ಪಂ. ಕಛೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬಂಟ್ವಾಳ: ಮಾಣಿ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಆಶ್ರಯದಲ್ಲಿ, ಮಾಣಿ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ, ರಾಜ್ಯ ಸರಕಾರದ ಪಂಚಾಯತ್ ರಾಜ್ ವ್ಯವಸ್ಥೆಯ ವೈಫಲ್ಯಗಳ ವಿರುದ್ಧ ಮತ್ತು ಜನಸಾಮಾನ್ಯರ ಹಲವಾರು ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ಮಾಜಿ ಪಂಚಾಯತ್ ಸದಸ್ಯರಾದ ಇಬ್ರಾಹಿಮ್ ಕೆ.ಮಾಣಿ, ರಮಣಿ, ಪ್ರೀತಿ ಡಿನ್ನಾ ಪಿರೇರಾ, ಸುನಂದ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಬ್ದುಲ್ ಅಜೀಜ್, ಅಬ್ದುಲ್ ರಝಾಕ್, ಪ್ರಮುಖರಾದ ನಾಗರಾಜ ಪೂಜಾರಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಹಮೀದ್ ಪಲ್ಕೆ, ಮೂಸಾ ಕರೀಂ, ದಯಾನಂದ ಪೂಜಾರಿ, ಗಿರೀಶ್ ಪೂಜಾರಿ,ಹರೀಶ್ ಮಾಣಿ, ಅಝೀಝ್ ಹಳಿರ,ಹಸೈನಾರ್ ಸೂರಿಕುಮೇರು,ಸಂದೀಪ್ ಮಾಣಿ, ಹನೀಫ್, ಮತ್ತಿತರರು ಉಪಸ್ಥಿತರಿದ್ದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...