Wednesday, April 17, 2024

ಅ.11: ತಾಳಮದ್ದಳೆ

 

ಬಂಟ್ವಾಳ: ಯಕ್ಷಾಭಿಮಾನಿಗಳು ಅಣ್ಣಳಿಕೆ, ಕೊಲ ಇದರ ವತಿಯಿಂದ 12ನೇ ವರ್ಷದ ಯಕ್ಷಗಾನ ತಾಳಮದ್ದಳೆ ಕೂಟ ಅಣ್ಣಳಿಕೆ ವಿಘ್ನೇಶ್ವರ ಸಭಾಭವನದಲ್ಲಿ ಅ.11ರಂದು ಆದಿತ್ಯವಾರ ಜರಗಲಿದೆ.
ಮಧ್ಯಾಹ್ನ 2 ಗಂಟೆಗೆ ಹರಿಪ್ರಸಾದ್ ರಾವ್ ಅವರ ಸಂಯೋಜನೆಯನೆಯಲ್ಲಿ ಜಿಲ್ಲೆಯ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ ಕಚ ದೇವಯಾನಿ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಹಿಮ್ಮೇಳದಲ್ಲಿ ಬಲಿಪ ಪ್ರಸಾದ್ ಭಟ್, ಕಾವ್ಯಶ್ರೀ ನಾಯಕ್ ಅಜೇರು,ಚಂದ್ರಶೆಖರ ಕೊಂಕಣಾಜೆ, ಶ್ರೀಧರ ಪಡ್ರೆ, ಸತ್ಯಜಿತ್ ರಾವ್ ರಾಯಿ,ವಿಜಯ ಅರಳ, ಮುಮ್ಮೇಳದಲ್ಲಿ ದಿನೇಶ್ ಶೆಟ್ಟಿ ಕಾವಳಕಟ್ಟೆ, ಅಶೋಕ್ ಭಟ್ ಉಜಿರೆ, ಜಯಪ್ರಕಾಶ್ ಪೆರ್ಮುದೆ, ಶಂಭು ಶರ್ಮ ವಿಟ್ಲ, ಪ್ರೇಮರಾಜ್ ಕೊಲ ಭಾಗವಹಿಸಲಿರುವರು. ಎಂದು ಸಂಘಟಕ ರಾಮಚಂದ್ರ ಶೆಟ್ಟಿಗಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...