Monday, April 8, 2024

ಇತಿಹಾಸ ಪ್ರಸಿದ್ದ ಕೇಪು ಉಳ್ಳಾಲ್ತಿ ದೇವಸ್ಥಾನದಲ್ಲಿ ಕಳ್ಳತನ

ವಿಟ್ಲ: ಇತಿಹಾಸ ಪ್ರಸಿದ್ದ ಕೇಪು ಉಳ್ಳಾಲ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಬೆಳ್ಳಿಯ ವಸ್ತುಗಳನ್ನು ಹಾಗೂ ಕಾಣಿಕೆ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಕಾರಣಿಕ ಕ್ಷೇತ್ರವಾದ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನವು ವಿಟ್ಲ ಅರಮನೆಯ ಆಡಳಿತಕ್ಕೆ ಒಳಪಟ್ಟಿದ್ದು, ಇದುಇತಿಹಾಸ ಪ್ರಸಿದ್ದ ದೇವಸ್ಥಾನವಾಗಿದೆ. ಇಲ್ಲಿನ ದೇವಿಗೆ ವರ್ಷಕ್ಕೊಂದು ಬಾರಿ ಮಕ್ಕಳ ಕಜಂಬು ಜಾತ್ರೆ ನಡೆಯುತ್ತದೆ. ಈ ದೇವಸ್ಥಾನಕ್ಕೆ ಇದೇ ಮೊದಲ ಬಾರಿ ಕಳ್ಳತನವಾಗಿದ್ದು, ಅರ್ಧ ಕೆ.ಜಿ. ಗೂ ಅಧಿಕ ತೂಕದ ಬೆಳ್ಳಿ ವಸ್ತು ಹಾಗೂ ಕಾಣಿಕೆ ಹಣ ಕಳ್ಳತನವಾಗಿದೆ. ಎಂದಿನಂತೆ ಇಂದು ಭಕ್ತರು ದೇವಸ್ಥಾನಕ್ಕೆ ಆಗಮಿಸಿದಾಗ ಈ ಬಗ್ಗೆ ತಿಳಿದು, ತಕ್ಷಣ ಅರ್ಚಕರಿಗೆ ಹಾಗೂ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ಧಾರೆ.
ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...