Saturday, April 6, 2024

ಸರ್ಕಾರಿ ಶಾಲೆ ಗೋಡೆ ಮೇಲೆ ಮೂಡಿದ ರೈಲು..!

ಕಡಬ : ಇಲ್ಲಿನ ಸರ್ಕಾರಿ ಶಾಲೆಯೊಂದರ ಗೋಡೆಗೆ ರೈಲು ಬೋಗಿಯಂತೆ ಬಣ್ಣ ಬಳಿದು ಶಾಲೆ ಆಕರ್ಷಕ ರೀತಿಯಲ್ಲಿ ಕಾಣುವಂತೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭಾರತೀಯ ರೈಲು ಬೋಗಿಯಾಗಿ ಬದಲಾಗಿದೆ. 1ರಿಂದ 5ನೇ ತರಗತಿ ವರೆಗೆ ಇರುವ ಈ ಶಾಲೆ 3.89 ಎಕರೆ ಜಾಗ ಹೊಂದಿದ್ದು, 1960-61ರಲ್ಲಿ ಸ್ಥಾಪನೆಗೊಂಡು, 2010ರಲ್ಲಿ ಸುವರ್ಣ ಸಂಭ್ರಮ ಆಚರಿಸಲಾಗಿತ್ತು.
ಇದೀಗ 60 ವರ್ಷ ಪೊರೈಸಿರುವ ಈ ಶಾಲೆಯು ವಜ್ರಮಹೋತ್ಸವ ಸಂಭ್ರಮದ ಸಿದ್ಧತೆಯಲ್ಲಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಕಾರ್ಯಕ್ರಮ ನಡೆದಿರಬೇಕಾಗಿತ್ತು. ಆದರೆ ಕೊರೊನಾ ಕಾರಣದಿಂದ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಇಲಾಖೆ ಅನುಮತಿ ನೀಡಿದ ತಕ್ಷಣ ವಜ್ರಮಹೋತ್ಸವ ಸಂಭ್ರಮ ಕಾರ್ಯಕ್ರಮ ನಡೆಸಲಾಗುವುದು ಎನ್ನುತ್ತಾರೆ ಶಾಲಾ ಮುಖ್ಯ ಶಿಕ್ಷಕರು.
ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಶಾಲೆಗೆ ಬಣ್ಣ ಬಳಿಯುವ ಸಂದರ್ಭದಲ್ಲಿ ಆಕರ್ಷಣೀಯ ರೀತಿಯಲ್ಲಿ ಬಣ್ಣ ಬಳಿಯುವ ಉದ್ದೇಶದಿಂದ ಶಾಲಾ ಗೋಡೆಗೆ ಭಾರತೀಯ ರೈಲು ಬೋಗಿಯ ಮಾದರಿ ಬಣ್ಣ ಬಳಿಯಲಾಗಿದ್ದು, ಇದಕ್ಕೆ “ಮೀನಾಡಿ ಎಕ್ಸ್‌ಪ್ರೆಸ್‌” ಎಂಬ ಹೆಸರಿಡಲಾಗಿದೆ. ಎಂಜಿನ್‍ನಲ್ಲಿ ಎಜುಕೇಶನ್ ಎಕ್ಸ್‌ಪ್ರೆಸ್‌ ಎಂದು ಬರೆಯಲಾಗಿದೆ.ಜತೆಗೆ ಒಂದೊಂದು ಬೋಗಿಗೂ ತರಗತಿಯ ಸಂಖ್ಯೆ ಹಾಕಲಾಗಿದೆ. ಶಾಲೆಯ ಡಿಐಎಸ್‍ಇ ಕೋಡ್‍ಅನ್ನು ಕೂಡ ಬರೆಯಲಾಗಿದೆ. ಒಂದು ಬದಿಯಿಂದ ರೈಲು ಎಂಜಿನ್ ಪ್ರಾರಂಭಗೊಂಡು, ಬೋಗಿಗಳು, ಕಿಟಕಿಗಳು ಸೇರಿದಂತೆ ರೈಲು ಬೋಗಿಯ ಮಾದರಿಯಲ್ಲಿಯೇ ಚಿತ್ರ ಬರೆದು ಬಣ್ಣ ಬಳಿಯಲಾಗಿದ್ದು, ಇದೀಗ ಶಾಲೆಯು ರೈಲು ಬೋಗಿಯಂತೆ ಕಂಗೊಳಿಸುತ್ತಿದೆ.ಕಡಬದ ಲಕ್ಷ್ಮೀ ಆರ್ಟ್ಸ್ ಲಕ್ಷ್ಮೀಶ ಹಾಗೂ ಮಾಧವ ಎಂಬುವರ ಕೈಚಳಕದಿಂದ ಮೀನಾಡಿ ಎಕ್ಸ್‌ಪ್ರೆಸ್‌ ಮೂಡಿಬಂದಿದೆ. ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸುವ ಉದ್ದೇಶವನ್ನಿಟ್ಟು ಈ ಕೆಲಸ ಮಾಡಲಾಗಿದೆ. ಪುಟ್ಟ ಮಕ್ಕಳು ಆಕರ್ಷಣೀಯ ವಸ್ತುಗಳಿಗೆ ಸೆಳೆಯುತ್ತಾರೆ. ಅದರಂತೆ ಸರ್ಕಾರಿ ಶಾಲೆಗೆ ರೈಲು ಬೋಗಿಯಂತೆ ಕಾಣಲು ಬಣ್ಣ ಬಳಿಯಲಾಗಿದೆ. ಇದೀಗ ಶಾಲೆಗೆ ಭೇಟಿ ನೀಡುವ ಮಂದಿ ರೈಲು ಬೋಗಿಯ ಬಳಿ ತಮ್ಮ ಫೋಟೋಗಳನ್ನು ತೆಗೆಸಿಕೊಳ್ಳುತ್ತಿದ್ದಾರೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...