Sunday, April 7, 2024

ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಶುರುವಾದ ನಂತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಲು ಕಾರಣವಾಗಿತ್ತು. ಇಂತಹ ಯೋಜನೆ ಸ್ಥಗಿತಕ್ಕೆ ಮಂಗಳವಾರದಿಂದ ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿಯವರು ಕೂಡ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಮಧ್ಯೆ ರಾಜ್ಯ ಸರ್ಕಾರ ಕೊರೋನಾ ಸಂಕಷ್ಟದ ನಡುವೆಯೂ ಜಾರಿಗೆ ತಂದಿದ್ದ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮವಾಗಿತ್ತು.
ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ವಿದ್ಯಾಗಮ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ತಿಳಿಸಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...