Thursday, April 18, 2024

ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಸಂಕಲ್ಪ ಕೈಗೊಂಡಾಗ ಮಾತ್ರ ನಿಜ ಅರ್ಥದ ಸ್ವಚ್ಛತಾ ಕಾರ್ಯಕ್ರಮ ಅನುಷ್ಠಾನ: ಕೋಟ ಶ್ರೀನಿವಾಸ ಪೂಜಾರಿ

ವಿಟ್ಲ: ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಸಂಕಲ್ಪ ಕೈಗೊಂಡಾಗ ಮಾತ್ರ ನಿಜ ಅರ್ಥದ ಸ್ವಚ್ಛತಾ ಕಾರ್ಯಕ್ರಮ ಅನುಷ್ಠಾನವಾಗುತ್ತದೆ. ಸ್ವಚ್ಚತೆಯನ್ನು ಕಾಪಾಡುವ ನಿಟ್ಟಿನಲ್ಲಿ ಬೇಕಾದ ಯೋಜನೆಯನ್ನು ಸರಕಾರ ರೂಪಿಸಿದ್ದು, ಜನಸಾಮಾನ್ಯರು ಸಹಕರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಶುಕ್ರವಾರ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಅನಂತಾಡಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಅನಂತಾಡಿ ಗ್ರಾ.ಪಂ. ನ ಆರಂಗಳದಲ್ಲಿ ನಿರ್ಮಾಣಗೊಂಡ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕ ಶೌಚಾಲಯ ಶಂಕುಸ್ಥಾಪನೆ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಮಾತನಾಡಿ,  ಬೆಳೆಯುತ್ತಿರುವ ಜಗತ್ತಿನಲ್ಲಿ ಸ್ವಚ್ಛತೆಗೆ ಬಹಳಷ್ಟು ಒತ್ತು ಕೊಡುವ ಅಗತ್ಯವಿದೆ. ಆಹಾರ ಹಾಗೂ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಒಳ್ಳೆಯ ವಿಷಯಕ್ಕೆ ವ್ಯವಸ್ಥೆಯನ್ನು ಬಳಸಿಕೊಳ್ಳುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆಯ ವಸ್ತುಪ್ರದರ್ಶನವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಘನತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಚಾಲನೆ ನೀಡಿದರು. ಕಾಮಗಾರಿಗೆ ಸಹಕಾರ ನೀಡಿದ ವ್ಯಕ್ತಿಗಳನ್ನು ಗೌರವಿಸಲಾಯಿತು. ಕಸ ಸಂಗ್ರಹಣೆಯ ಬುಟ್ಟಿಗಳ ವಿತರಣೆ ನಡೆಯಿತು.
ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ಮಲ್ಲಿಕಾ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ, ಅನಂತಾಡಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಸನತ್ ಕುಮಾರ ರೈ, ಉಪಾಧ್ಯಕ್ಷೆ ಕವಿತಾ, ಸುಲೋಚನಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಆನಂದ ಕುಮಾರ್ ಪ್ರಸ್ತಾವನೆಗೈದರು. ಅನಂತಾಡಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಪ್ರವೀಣ್ ಜೋಷಿ ವಂದಿಸಿದರು. ನೆರವು ಘಟಕ ಎಚ್‌ಆರ್‌ಡಿ ನವೀನ್, ಡೊಂಬಯ್ಯ ಇಡ್ಕಿದು ಕಾರ್ಯಕ್ರಮ ನಿರೂಪಿಸಿದರು. ಪಿಡಿಒ ಜಯರಾಮ ಕೆ. ಸಹಕರಿಸಿದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...