Thursday, April 18, 2024

ವಿಟ್ಲ ಠಾಣಾಧಿಕಾರಿ‌ ವಿನೋದ್ ರೆಡ್ಡಿಯವರ ನೇತೃತ್ವದ ಪೋಲಿಸರ ತಂಡಕ್ಕೆ ಸನ್ಮಾನ ಕಾರ್ಯಕ್ರಮ

ವಿಟ್ಲ:ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಡಡ್ಕ ಸಮೀಪದ ಮರುವಾಳ ಎಂಬಲ್ಲಿ ಬೀಡಿ ಕೊಟ್ಟು ಮನೆಗೆ ಬರುತ್ತಿದ್ದ ಮಹಿಳೆಯೋರ್ವರ ಚಿನ್ನದ ಸರ ಕಳ್ಳತನ ಮಾಡಿರುವ ಆರೋಪಿಗಳನ್ನು 24 ಗಂಟೆಯ ಒಳಗಡೆ ಬಂಧಿಸುವಲ್ಲಿ ಯಶಸ್ವಿಯಾಗಿರುವ ವಿಟ್ಲ ಠಾಣಾಧಿಕಾರಿ‌ ವಿನೋದ್ ರೆಡ್ಡಿಯವರ ನೇತೃತ್ವದ ಪೋಲಿಸರ ತಂಡವನ್ನು ಇಂದು‌ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಹಾಗೂ ಶ್ರೀ ವಿಷ್ಣುಮೂರ್ತಿ ಆಡಳಿತ ಸಮಿತಿ ವಿಷ್ಣುಮೂರ್ತಿ ದೇವಸ್ಥಾನ ಕುಂಡಡ್ಕ ವತಿಯಿಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಸನ್ಮಾನಿಸಲಾಯಿತು.

ಕೃಷ್ಣಯ್ಯ ಕೆ. ವಿಟ್ಲ ಅರಮನೆ, ವೆಂಕಟೇಶ್ವರ ಭಟ್ ನೂಜಿ, ದಯಾನಂದ ಶೆಟ್ಟಿ ಉಜಿರೆಮಾರು, ಗೋವಿಂದರಾಜ್ ಭಟ್ ಪೆರ್ವಾಜೆ, ವೇಣುಗೋಪಾಲ ಶೆಟ್ಟಿ ಮರುವಾಳ ಮೊದಲಾದವರು ಸಿಬ್ಬಂದಿಗಳನ್ನು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಯುವಕ ವೃಂದದ ಕಾರ್ಯಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...