Wednesday, April 10, 2024

ವಿಟ್ಲ: ಈದ್ ಮಿಲಾದ್ ಆಚರಣೆ

ವಿಟ್ಲ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.) ರವರ ಜನ್ಮ ದಿನಾಚರಣೆಯು ವಿಟ್ಲ ಕೇಂದ್ರ ಜಮಾ ಮಸೀದಿಯಲ್ಲಿ ನಡೆಯಿತು.
ಮಸೀದಿಯ ಅಧ್ಯಕ್ಷ ಇಬ್ರಾಹಿಂ ಮೇಗಿನಪೇಟೆ ಧ್ವಜಾರೋಹಣ ಮಾಡಿದರು. ಖತೀಬ್ ಮುಹಮ್ಮದ್ ಅಲಿ ಫೈಝಿ ದುವಾ ನೆರವೇರಿಸಿ, ಪ್ರವಾದಿಯವರ ಮೇಲಿನ ಪ್ರೀತಿ ಕೇವಲ ಒಂದೇ ದಿನಕ್ಕೆ ಸೀಮಿತವಾಗದೆ ಜೀವನ ಪರ್ಯಂತ ಅಳವಡಿಕೊಂಡು ನೆಬಿಯವರ ತತ್ವಾದರ್ಶಗಳನ್ನು ಮೈಗೂಡಿಸುವಂತೆ ಸಂದೇಶ ನೀಡಿದರು.
ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ, ಮಹಮ್ಮದ್ ಗಮಿ, ಕಾರ್ಯದರ್ಶಿ ಇಬ್ರಾಹಿಂ ಕೊಲ್ನಾಡ್, ಜತೆ ಕಾರ್ಯದರ್ಶಿ ಇಕ್ಬಾಲ್ ಶೀತಲ್, ಹೊರೈಝನ್ ಶಾಲೆಯ ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಅಬೂಬಕರ್ ಅನಿಲಕಟ್ಟೆ, ಶೆರೀಫ್ ಇಂಡಿಯನ್, ಇಸ್ಮಾಯಿಲ್ ಪರ್ತಿಪ್ಪಾಡಿ ಯೂಸೂಫ್ ಗಮಿ, ಅಝೀಝ್ ಸನಾ, ಸರ್ಫರಾಝ್, ರಫೀಕ್ ಪೊನ್ನೋಟು, ಹನೀಫ್ ದಾರಿಮಿ, ಹಕೀಂ ಅರ್ಷದಿ ಮುಂತಾದವರು ಉಪಸ್ಥಿತರಿದ್ದರು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...