Sunday, April 7, 2024

ಅನಧಿಕೃತ ಗೂಡು ಅಂಗಡಿಗಳ ತೆರವಿಗೆ ಕ್ರಮ ಕೈಗೊಳ್ಳಿ: ವಿಟ್ಲ ಸಾಮಾನ್ಯ ಸಭೆಯಲ್ಲಿ ಒತ್ತಾಯ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿಟ್ಲ-ಸಾಲೆತ್ತೂರು ಮಾರ್ಗದ ಶಾಲಾ ರಸ್ತೆಯ ಬಳಿ ದಿನೇ ದಿನೇ ಅನಧಿಕೃತ ಗೂಡು ಅಂಗಡಿಗಳು ನಿರ್ಮಾಣಗೊಳ್ಳುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಪಟ್ಟಣ ಪಂಚಾಯಿತಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ತಕ್ಷಣವೇ ಅದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ಅರುಣ್ ಎಂ. ವಿಟ್ಲ ಆಗ್ರಹಿಸಿದರು.
ಅವರು ಮಂಗಳವಾರ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಗ್ರಹಿಸಿದರು.
ಸದಸ್ಯ ರವಿಪ್ರಕಾಶ್ ಮಾತನಾಡಿ ಚರ್ಚ್ ರಸ್ತೆಯಲ್ಲಿ ಹೊಸ ಗೂಡು ಅಂಗಡಿಗಳು ತಲೆ ಎತ್ತುತ್ತಿವೆ. ಮುಂದಿನ ದಿನಗಳಲ್ಲಿ ವಿಟ್ಲ ಪೇಟೆಯಲ್ಲಿ ಪಾರ್ಕಿಂಗ್ ಸಮಸ್ಯೆ ಸಂಭವಿಸಿದಾಗ ಚರ್ಚ್ ರಸ್ತೆಯಲ್ಲಿ ಪಾರ್ಕಿಂಗ್‌ಗೆ ಸ್ಥಳ ನೀಡಬಹುದು. ಆದರೆ ಇದೀಗ ಗೂಡಂಗಡಿ ನಿರ್ಮಾಣವಾಗಿರುವುದರಿಂದ ಸಮಸ್ಯೆಯಾಗಲಿದೆ ಎಂದರು. ಈ ಸಂದರ್ಭ ಮಾತನಾಡಿದ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ ಅವರು ಅಕ್ರಮ ಗೂಡಂಗಡಿಗಳ ನಿರ್ಮಾಣ ಒಂದು ವರ್ಷದಲ್ಲಿ ಮಾತ್ರ ನಡೆದದ್ದಲ್ಲ, ಕಳೆದ ಬಾರಿಯ ಅಧ್ಯಕ್ಷರ ಅವಧಿಯಲ್ಲಿಯೂ ಇತ್ತು, ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಸದಸ್ಯ ಶ್ರೀಕೃಷ್ಣ ಮಾತನಾಡಿ ಬೇರೆ ಬೇರೆ ವಾಹನಗಳಲ್ಲಿ ವಿಟ್ಲ ಪೇಟೆಗೆ ಬಂದು ಅಕ್ರಮವಾಗಿ ತರಕಾರಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ತೆರಿಗೆ ಪಾವತಿಸುವ ಅಂಗಡಿಯವರಿಗೆ ತೊಂದರೆಯಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಕೋಳಿ ಅಂಗಡಿಯವರು ಬಾಡಿಗೆ ಪಾವತಿಸದೇ ವ್ಯಾಪಾರ ಮಾಡುತ್ತಿದ್ದಾರೆ. ತಕ್ಷಣವೇ ಈ ಅಂಗಡಿಗೆ ಬೀಗ ಹಾಕಬೇಕು ಎಂದು ಆಗ್ರಹಿಸಿದರು.
ಅರುಣ್ ಎಂ. ವಿಟ್ಲ ಮಾತನಾಡಿ ವಿಟ್ಲದ ಮೇಗಿನಪೇಟೆ ಕಲ್ಲಕಟ್ಟದಲ್ಲಿರುವ ಮದರಸ ಸಮಿತಿಯವರು ರಕ್ತೇಶ್ವರೀ ದೈವಸ್ಥಾನಕ್ಕೆ ತೆರಳುವ ರಸ್ತೆಯನ್ನು ಅತಿಕ್ರಮಿಸಿ ಆವರಣಗೋಡೆ ನಿರ್ಮಿಸಿದ್ದು, ಇದರಿಂದ ದೈವಸ್ಥಾನಕ್ಕೆ ತೆರಳುವ ಭಕ್ತಾದಿಗಳಿಗೆ ತೊಂದರೆಯಾಗಿದೆ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು. ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ದೇವಸ್ಥಾನ, ಮಸೀದಿ, ಚರ್ಚ್‌ಗಳ ಜಾಗದ ವಿವಾದ ಬಂದಾಗ ಮಾನವೀಯತೆ ಬೇಕು. ಯಾವುದೇ ಸಮಸ್ಯೆ ಬಂದಾಗ ಮಾತುಕತೆ ಮೂಲಕ ಪರಿಹರಿಸಿಕೊಂಡು ಸೌಹಾರ್ದತೆಯಿಂದ ಹೋಗಬೇಕು ಎಂದರು. ಅರುಣ್ ಮಾತನಾಡಿ ವಿಟ್ಲದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಜಾಗದ ವಿಚಾರದಲ್ಲಿ ಮುಂದೆ ಯಾವುದೇ ತೊಂದರೆ ಆಗಬಾರದು, ಈ ದೆಸೆಯಿಂದ ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಕಲ್ಲಕಟ್ಟ, ಸದಸ್ಯರಾದ ರಾಮ್‌ದಾಸ್ ಶೆಣೈ, ಚಂದ್ರಕಾಂತಿ ಶೆಟ್ಟಿ, ಇಂದಿರಾ ಅಡ್ಯಾಳಿ, ಗೀತಾ ಪುರಂದರ, ಸುನೀತಾ ಕೋಟ್ಯಾನ್, ಅಬೂಬಕ್ಕರ್, ಲತಾ ಅಶೋಕ, ಲೋಕನಾಥ ಶೆಟ್ಟಿ ಕೊಲ್ಯ, ಉಷಾ ಕೃಷ್ಣಪ್ಪ, ಮುಖ್ಯಾಧಿಕಾರಿ ಮಾಲಿನಿ, ಇಂಜಿನಿಯರ್ ಶ್ರೀಧರ್, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಸಿಬ್ಬಂದಿ ರತ್ನ ಮೊದಲಾದವರು ಭಾಗವಹಿಸಿದ್ದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...