Saturday, April 6, 2024

ವಿಟ್ಲ: ವಿಟ್ಲ ವಲಯ ಸಮಾವೇಶ

ವಿಟ್ಲ: ಮಹಿಳಾ ಸಬಲೀಕರಣದ ನೆಪದಲ್ಲಿ ಸೇವಾ ಸಂಸ್ಥೆಗಳು ಮಾಡುವ ಸಹಾಯಕ್ಕೆ ಬಡ್ಡಿ ವಿಧಿಸುವ ಹಾಗಿಲ್ಲ ಎಂಬುದನ್ನು ಪ್ರತಿಯೊಬ್ಬರು ತಿಳಿಯಬೇಕು. ಚಳವಳಿಗೆ ತಯಾರಾದಾಗ ಮಾತ್ರ ಬದಲಾವಣೆಗಳು ಸಾಧ್ಯ ಎಂದು ಕರ್ನಾಟಕ ರಾಜ್ಯ ಋಣ ಮುಕ್ತ ಹೋರಾಟ ಸಮಿತಿ ಅಧ್ಯಕ್ಷ ಬಿ. ಎಂ. ಭಟ್ ಹೇಳಿದರು.

ಅವರು ಬುಧವಾರ ಲ್ಯಾಂಪ್ಸ್ ಸೊಸೈಟಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಋಣ ಮುಕ್ತ ಹೋರಾಟ ಸಮಿತಿ ವಿಟ್ಲ ವಲಯ, ಬಂಟ್ವಾಳ ವಿದ್ಯುತ್ ಬಳಕೆದಾರರ ಹೋರಾಟ ಸಮಿತಿ ಜಂಟಿ ಆಶ್ರಯದಲ್ಲಿ ಸಾಲ ಸಂತ್ರಸ್ತ ಮಹಿಳೆಯರ ಬೀಡಿ ಕಾರ್ಮಿಕರ ಮತ್ತು ಬಡ ಮತ್ತು ಮಧ್ಯಮ ವರ್ಗದ ವಿದ್ಯುತ್ ಬಳಕೆದಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿಟ್ಲ ವಲಯ ಸಮಾವೇಶದಲ್ಲಿ ಮಾತನಾಡಿದರು.

ದಕ ಜಿಲ್ಲಾ ಋಣ ಮುಕ್ತ ಹೋರಾಟ ಸಮಿತಿ ಸಂಚಾಲಕ ಎಲ್. ಮಂಜುನಾಥ್ ಮಾತನಾಡಿ ದಾಖಲೆಗಳಲ್ಲಿ ಸುಳ್ಳು ಮಾಹಿತಿಗಳನ್ನು ತುಂಬಿ ಬಡ ಮಹಿಳೆಯರಿಗೆ ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ವಂಚಿಸಲಾಗುತ್ತಿದೆ. ಒಟ್ಟಾಗಿ ಬದುಕುವುದನ್ನು ಕಲಿತಾಗ ಮಾತ್ರ ಅನ್ಯಾಯವನ್ನು ಮೆಟ್ಟಿ ನಿಲ್ಲಲು ಸಾಧ್ಯ ಎಂದು ತಿಳಿಸಿದರು.

ಬಂಟ್ವಾಳ ವಿದ್ಯುತ್ ಬಳಕೆದಾರರಹೋರಾಟ ಸಮಿತಿ ಗೌರವಾಧ್ಯಕ್ಷ ರಮಾನಾಥ ವಿಟ್ಲ ಮಾತನಾಡಿ ಎಸ್ಕಾಂಗಳನ್ನು ಖಾಸಗೀಕರಣ ಮಾಡುತ್ತಾ ಸಾಗಿದಲ್ಲಿ ರೈತರಿಗೆ ಸಂಕಷ್ಟ ತಪ್ಪಿದ್ದಲ್ಲ. ತಾಲೂಕಿನ ೧೦೦ಕ್ಕೂ ಅಧಿಕ ಮೀಟರ್ ರೀಡರ್‌ಗಳನ್ನು ಅಮಾನವೀತೆಯಿಂದ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ್ ಸೇವಾ ಸಮಿತಿ ದ ಕ ಜಿಲ್ಲಾಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು ವಹಿಸಿದ್ದರು. ಬೆಳ್ತಂಗಡಿ ದಲಿತ್ ಹಕ್ಕುಗಳ ರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಈಶ್ವರಿ, ಋಣ ಮುಕ್ತ ಹೋರಾಟ ಸಮಿತಿ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಪ್ರಮೀಳಾ, ಸಂಚಾಲಕಿ ರಂಜಿನಿ, ಬಂಟ್ವಾಳ ವಿದ್ಯುತ್ ಬಳಕೆದಾರರ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನೌಫಲ್ ಮತ್ತಿತರರು ಉಪಸ್ಥಿತರಿದ್ದರು.
ಚಂದ್ರಶೇಖರ್ ಸ್ವಾಗತಿಸಿದರು. ಪ್ರಸಾದ್ ಅನಂತಾಡಿ ವಂದಿಸಿದರು. ಪ್ರಸಾದ್ ಬೊಳ್ಮಾರ್ ಕಾರ್ಯಕ್ರಮ ನಿರೂಪಿಸಿದರು.

 

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...