Wednesday, October 25, 2023

ಹೆದ್ದಾರಿಯ ಬದಿಯಲ್ಲಿ ನಡೆದು ಹೋಗುತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಬಾಲಕಿ ಸಾವು, ಇಬ್ಬರು ಗಂಭೀರ

Must read

ಪುತ್ತೂರು: ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದವರಿಗೆ ಕಾರೊಂದು ಢಿಕ್ಕಿ ಹೊಡೆದು, ಓರ್ವ ಬಾಲಕಿ ಸಾವನ್ನಪ್ಪಿ, ಇನ್ನೋರ್ವ ಬಾಲಕಿ ಹಾಗೂ ಮಹಿಳೆ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ದರ್ಬೆ ಬೈಪಾಸ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಗೋಪಿ ಹಾಗೂ ಕವಿತಾ ದಂಪತಿಯ ಪುತ್ರಿ ಸ್ವಾತಿ(9) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಜಾಲ್ಸೂರಿಗೆ ಚಲಿಸುತ್ತಿದ್ದ ಸ್ವಿಫ್ಟ್‌ ಕಾರು ದರ್ಬೆ ಬೈಪಾಸಿನ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ಈರ್ವರು ಮಕ್ಕಳು ಹಾಗೂ ಓರ್ವ ಮಹಿಳೆಗೆ ಡಿಕ್ಕಿ ಹೊಡೆದಿರುವ ಸ್ವಿಫ್ಟ್ ಕಾರು ಮುಂಭಾಗದಲ್ಲಿ ನಿಂತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಓರ್ವ ಬಾಲಕಿ ಸಾವನ್ನಪಿದ್ದು ಇನ್ನೋರ್ವ ಬಾಲಕಿ ಹಾಗೂ ಮಹಿಳೆ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

More articles

Latest article