Wednesday, April 17, 2024

ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದ ಇನ್ನಿಬ್ಬರು ಆರೋಪಿಗಳು ಬಂಧನ: ಬಂಟ್ವಾಳ ಎಸ್.ಐ.ಅವಿನಾಶ್ ನೇತೃತ್ವದ ತಂಡದಿಂದ ಕಾರ್ಯಚರಣೆ

ಬಂಟ್ವಾಳ: ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಗುರುವಾರ ಸಂಜೆ ತೊಕ್ಕೊಟ್ಟು ಎಂಬಲ್ಲಿ ಬಂಧಿಸಿದೆ.
ಮೂಲತಃ ನಂದಾವರ ನಿವಾಸಿ ಪ್ರಸ್ತುತ ತೊಕ್ಕೊಟ್ಟುವಿನಲ್ಲಿ ವಾಸವಾಗಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತ ಆರೋಪಿಗಳು.

ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ನಡೆಸಿದೆ.
ಸ್ನೇಹಿತರ ನಡುವೆ ಹಣದ ಮತ್ತು ವೈಯಕ್ತಿಕ ವಿಚಾರದಲ್ಲಿ ಮನಸ್ತಾಪ ಉಂಟಾಗಿ ಕೊಲೆ ನಡೆಸಿದ್ದ ಎಂದು ಹೇಳಲಾಗಿತ್ತು.
ಖಲೀಲ್ ಮತ್ತು ಆತನ ಸ್ನೇಹಿತರಾದ ಹಫೀಸ್ ಯಾನೆ ಅಪ್ಪಿ ಹಾಗೂ ಇರ್ಶಾದ್ ಕೊಲೆ ನಡೆಸಿ ಪರಾರಿಯಾಗಿದ್ದನ್ನು ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದರು. ಕೊಲೆ ನಡೆಸಿದವರ ಬಗ್ಗೆ ಮಾಹಿತಿ ಪಡೆದ ಪೋಲೀಸರು ಆರೋಪಿಗಳ ಬಂಧನಕ್ಕೆ ಎರಡು ತಂಡ ರಚಿಸಿದ್ದರು.
ಕೊಲೆ ನಡೆಸಿ ಬಳಿಕ ಬೆಂಗಳೂರು ಕಡೆಗೆ ಪರಾರಿಯಾಗಲು ಯತ್ನಿಸುತ್ತಿರುವ ಬಗ್ಗೆ ಪೋಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ನಗರ ಠಾಣಾ ಎಸ್.ಐ. ಅವಿನಾಶ್ ಹಾಗೂ ಗ್ರಾಮಾಂತರ ಠಾಣಾ ಎಸ್.ಐ ಪ್ರಸನ್ನ ಬಿಸಿರೋಡಿನಿಂದ ಗುಂಡ್ಯ ವರೆಗೆ ವಾಹನವನ್ನು ಬೆನ್ನಟ್ಟಿಕೊಂಡು ಹೋಗಿ ಗುಂಡ್ಯ ತಲುಪುತ್ತಿದ್ದಂತೆ ಖಲೀಲ್ ನ ವಾಹನಕ್ಕೆ ಅಡ್ಡಲಾಗಿ ಇರಿಸಿ ಬಂಧಿಸಲು ಮುಂದಾಗುತ್ತಾರೆ.
ಆದರೆ ಖಲೀಲ್ ಮತ್ತು ಆತನ ಸಹಚರರಾದ ಹಫೀಸ್ ಮತ್ತು ಇರ್ಶಾದ್ ಪೋಲೀಸರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ.
ಬಂಧನದ ಸಂದರ್ಭದಲ್ಲಿ ಪೋಲೀಸ್ ಮತ್ತು ಆರೋಪಿಗಳ ನಡುವೆ ಗಲಾಟೆಯಲ್ಲಿ ಗ್ರಾಮಾಂತರ ಎಸ್.ಐ. ಪ್ರಸನ್ನ ಅವರು ಗಾಯಗೊಂಡಿದ್ದರು. ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದಾಗ ನಗರ ಠಾಣಾ ಎಸ್.ಐ.ಅವಿನಾಶ್ ಆರೋಪಿ ಖಲೀಲ್ ಮೇಲೆ ಗುಂಡು ಹಾರಿಸಿ ಬಂಧಸಿದ್ದರು. ಆದರೆ ಉಳಿದ ಇಬ್ಬರು ಆರೋಪಿಗಳು ಗುಂಡ್ಯದ ಗುಡ್ಡೆಯಲ್ಲಿ ಪರಾರಿಯಾಗಿದ್ದರು.
ಉಪ್ಪಿನಂಗಡಿ ಎಸ್.ಐ. ಈರಯ್ಯ ನೇತೃತ್ವದ ತಂಡ ಗುಡ್ಡೆಯಲ್ಲಿ ಆರೋಪಿಗಳನ್ನು ಹುಡುಕಿದರು ಅವರು ಅಲ್ಲಿಂದ ಪಾರಾರಿಯಾಗಿದ್ದರು.

ಗಾಯಗೊಂಡ ಖಲೀಲ್ ಹಾಗೂ ಘಟನೆಯಲ್ಲಿ ಗಾಯಗೊಂಡ ಎಸ್.ಐ. ಪ್ರಸನ್ನ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗುಂಡೇಟಿನಿಂದ ಗಾಯಗೊಂಡ ಆರೋಪಿ ಖಲೀಲ್ ಇನ್ನೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೇ ಸಂದರ್ಭದಲ್ಲಿ ಪರಾರಿಯಾಗಿದ್ದ ಹಫೀಸ್ ಯಾನೆ ಅಪ್ಪಿ ಹಾಗೂ ಇರ್ಶಾದ್ ಇಬ್ಬರು ಆರೋಪಿಗಳನ್ನು ಗುರುವಾರ ಸಂಜೆ ತೊಕ್ಕೊಟ್ಟುವಿನಲ್ಲಿ ಬಂಧಿಸಿದ್ದಾರೆ.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.