Wednesday, April 17, 2024

ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸುವ ಭರವಸೆ ನೀಡಿದ ಸಚಿವ ಸುಧಾಕರ್‍

ಬೆಂಗಳೂರು: ಕೊರೊನಾ ವಾರಿಯರ್‍ ಗಳಾಗಿ ದುಡಿದರೂ ಸಂಭಾವನೆ ಹೆಚ್ಚಿಸದ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಸುಧಾಕರ್‍ ಅವರು ಮಾಸಿಕ 12 ಸಾವಿರ ರೂ. ನೀಡುವ ಕುರಿತು ಶೀಘ್ರವೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ನೀಡಬೇಕೆಂದು ಬಹುದಿನಗಳ ಬೇಡಿಕೆ ಈಡೇರಿಲ್ಲ. ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಚಿವ ಸುಧಾಕರ್‍ ಅವರನ್ನು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಇದಕ್ಕೆ ಸ್ಪಂದಿಸಿದ ಸಚಿವ ಸುಧಾಕರ್‍, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ನೀಡುವ ಸಂಬಂಧ ಶೀಘ್ರವೇ ಮಹತ್ವದ ಸಭೆ ಕರೆಯುವುದಾಗಿ ಸಂಘಕ್ಕೆ ಭರವಸೆ ನೀಡಿದ್ದಾರೆ.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.