Friday, April 12, 2024

ಕಡೇಶಿವಾಲಯದ ಜಯಲಕ್ಮೀ ಅವರಿಗೆ ಕ್ರೀಡಾರತ್ನ ಪ್ರಶಸ್ತಿ

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಿವಾಸಿ ಜಯಲಕ್ಷ್ಮಿ ಜಿ. ಅವರು 2017ನೇ ಸಾಲಿನ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಡಬಿದಿರೆ ಆಳ್ವಾಸ್ ಲಾ ಕಾಲೇಜಿನಲ್ಲಿ  ವಿದ್ಯಾಭ್ಯಾಸ ಪಡೆದಿರುವ ಅವರು ಪ್ರಸ್ತುತ ಅದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬಾಲ್ ಬಾಡ್ಮಿಂಟನ್ ಕೋಚಿಂಗ್ ನೀಡುತ್ತಿದ್ದಾರೆ.

ಕಡೇಶ್ವಾಲ್ಯ ಪೆರ್ಲಾಪು ಗಾಣದಕೊಟ್ಯ ನಿವಾಸಿ ದಿ| ವಿಶ್ವನಾಥ ಸಪಲ್ಯ-ರೇವತಿ ದಂಪತಿಯ ಪುತ್ರಿಯಾಗಿರುವ ಇವರು ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಪೂರ್ಣಗೊಳಿಸಿ, ಬಳಿಕ ಆಳ್ವಾಸ್‌ನಲ್ಲಿ ಪಿಯು ಉಚಿತ ಶಿಕ್ಷಣ ಪಡೆದಿರುತ್ತಾರೆ. ಅದೇ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನೂ ಪೂರ್ಣಗೊಳಿಸಿರುತ್ತಾರೆ.
ತನ್ನ ಕೋಚ್ ಪ್ರವೀಣ್ ಕುಮಾರ್ ಅವರಿಂದ ಬಾಲ್ ಬ್ಯಾಡ್ಮಿಂಟನ್ ಕಲಿತು ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಕರ್ನಾಟಕ ತಂಡದ ನಾಯಕಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ನಾಲ್ಕು ಬಾರಿ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಶಾಸಕ ರಾಜೇಶ್ ನಾಯ್ಕ್ ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...