Sunday, April 7, 2024

ಬಂಟ್ವಾಳ ಸಂಪೂರ್ಣ ಪೋಲೀಸ್ ಕಟ್ಟೆಚ್ಚರ

ಬಂಟ್ವಾಳ: ಇತ್ತೀಚಿಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸುಧಾರಿಸಲು ಬಂಟ್ವಾಳ ಪೋಲೀಸರು ಸಂಪೂರ್ಣ ಕಟ್ಟೆಚ್ಚರ ವಹಿಸಿ ಜಿಲ್ಲೆಯ ಹಿರಿಯ ಅಧಿಕಾರಿಗಳು ರೌಂಡ್ಸ್ ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂದು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಶಿವಮೊಗ್ಗ ತಿಳಿಸಿದ್ದಾರೆ.
ಬೆಳ್ತಂಗಡಿ, ಪುತ್ತೂರು, ಸುಬ್ರಹ್ಮಣ್ಯ, ಪುಂಜಾಲಕಟ್ಟೆ ಸೇರಿದಂತೆ ಹಲವು ಠಾಣೆಗಳ ಹಿರಿಯ ಅಧಿಕಾರಿಗಳು ಬಂಟ್ವಾಳದಲ್ಲಿ ರಾತ್ರಿ ಹಗಲು ರೌಂಡ್ಸ್ ಕಾರ್ಯದಲ್ಲಿ ತೊಡಗಿದ್ದಾರೆ.

ಆಯಕಟ್ಟಿನ ಸ್ಥಳಗಳಲ್ಲಿ ಕೆ.ಎಸ್.ಆರ್. ಪಿ.ಡಿ.ಎ.ಆರ್. ನಿಯೋಜನೆ ಮಾಡಲಾಗಿದೆ.
ಬಂಟ್ವಾಳ ತಾಲೂಕಿನ ಗಡಿಭಾಗದಲ್ಲಿ ಮತ್ತು ಬಂಟ್ವಾಳ , ವಿಟ್ಲ ಹಾಗೂ ಗ್ರಾಮಾಂತರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಟ್ಟು 8 ಕಡೆಗಳಲ್ಲಿ ಚೆಕ್ ಪಾಯಿಂಟ್ ಅಳವಡಿಸಲಾಗಿದೆ. ಜಿಲ್ಲೆಯಿಂದ ಹೊರಹೋಗುವ ಹಾಗೂ ಹೊರರಾಜ್ಯಗಳಿಂದ ಬರುವ ವಾಹನಗಳ ಬಗ್ಗೆ ಸೂಕ್ತ ನಿಗಾವಹಿಸುವ ಕೆಲಸ ನಡೆಯುತ್ತಿದೆ.
ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿ ರುವ ರೌಡಿಗಳನ್ನು ಠಾಣೆ ಗೆ ಕರೆದು ಮೇಲಾಧಿಕಾರಿಗಳು ರೌಡಿಪೆರೇಡ್ ನಡೆಸಿ ಅವರ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ.

10 ಗಂಟೆಗೆ ಪೇಟೆ ಬಂದ್

ಸೂಕ್ಮ ಪ್ರದೇಶಗಳಾದ ಬಿ.ಸಿ.ರೋಡು, ಕೈಕಂಬ, ಫರಂಗಿಪೇಟೆ, ಮೆಲ್ಕಾರ್ , ಕಲ್ಲಡ್ಕ ಹಾಗೂ ಬಂಟ್ವಾಳ ಪೇಟೆಯಲ್ಲಿ ಅಂಗಡಿಮುಗ್ಗಟ್ಟುಗಳನ್ನು ರಾತ್ರಿ 10 ಗಂಟೆಯ ಒಳಗೆ ಬಂದ್ ಮಾಡಿಸಲಾಗುತ್ತಿದೆ. ಯುವಕರು ಅನಾವಶ್ಯಕ ಪೇಟೆಯಲ್ಲಿ ತಿರುಗಾಟ ನಡೆಸಿ ನಡೆಯುವ ಅನಾಹುತಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...