Friday, April 5, 2024

ವರ್ತಮಾನ ಪತ್ರಿಕೆ ಓದುವ ಮೂಲಕ ಜ್ಞಾನ ವೃದ್ಧಿ : ಚೇತನ್ ಮುಂಡಾಜೆ

ಬಂಟ್ವಾಳ: ವಿದ್ಯಾರ್ಥಿಗಳು ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ಆ ಗುರಿಯನ್ನು ತಲುಪುವಲ್ಲಿ ತಮ್ಮ ಸಂಪೂರ್ಣ ಗಮನವನ್ನು ಕೇಂದ್ರೀಕರಿಸಿಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ ಹೇಳಿದರು.
ಅವರು ನಿನ್ನೆ (ನ.22)  ಬಿ.ಸಿ.ರೋಡಿನ ರಾಜರಾಜೇಶ್ವರಿ ಕಾಂಪ್ಲೆಕ್ಸ್‌ನಲ್ಲಿರುವ ಯುನಿಕ್ ಎಜುಕೇರ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಅಧ್ಯಯನ ತಂತ್ರಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ವರ್ತಮಾನ ಪತ್ರಿಕೆಗಳನ್ನು ಓದುವ ಮೂಲಕ ನಾವು ಆದಷ್ಟು ಪ್ರಸ್ತುತ ವಿಚಾರಗಳನ್ನು ತಿಳಿದುಕೊಳ್ಳಬೇಕು. ಆ ಮೂಲಕವಾಗಿ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಂಟ್ವಾಳ ಲಯನ್ಸ್ ಕ್ಲಬ್ ಕೃಷ್ಣಶ್ಯಾಮ್ ಉದ್ಘಾಟನೆ ಮಾಡಿ ಶುಭ ಹಾರೈಸಿದರು.
ಯುನಿಕ್ ಎಜುಕೇರ್‌ನ ಲಕ್ಷ್ಮಣ ಅಗ್ರಬೈಲ್ ಸ್ವಾಗತಿಸಿ, ಕವಿತಾ ಯಾದವ್ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕಿ ಭಾರತಿ ವಸಂತ ಕುಮಾರ್ ಅಣ್ಣಳಿಕೆ ನಿರೂಪಿಸಿದರು. ವೈಷ್ಣವಿ ಮತ್ತು ಧನ್ಯಾ ಪ್ರಾರ್ಥಿಸಿದರು. ವಕೀಲ ಯಶೋಧ, ಯಾದವ ಅಗ್ರಬೈಲ್, ದೇವದಾಸ್, ಡಾ. ಬಾಲಕೃಷ್ಣ ಕುಮಾರ್ ಸಹಕರಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...