Saturday, April 6, 2024

ಬಂಟ್ವಾಳ ಟೌನ್ ರೋಟರಿ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

ಬಂಟ್ವಾಳ: ಬಂಟ್ವಾಳ ಟೌನ್ ರೋಟರಿ ಕ್ಲಬ್ ಇದರ ಅನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆಯನ್ನು ರೋಟರಿ ಸಾಧನ ಸಭಾಂಗಣ ಬಿ.ಸಿ. ರೋಡ್ ಇಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ರೋಟರಿ ಅಧ್ಯಕ್ಷರಾದ ರೊ. ಪದ್ಮನಾಭ ರೈ ಉದ್ಘಾಟಿಸಿ ಶುಭ ಹಾರೈಸಿದರು.

ಅನ್ಸ್ ಅಧ್ಯಕ್ಷೆ ರೊ. ಸವಿತಾ ಚಿತ್ತರಂಜನ್ ಶೆಟ್ಟಿ, ಅನ್ನೆಟ್ಸ್ ಗಳಿಗೆ ವಿವಿಧ ಮನರಂಜನಾ ಕಾರ್ಯಕ್ರಮ ವನ್ನು ನಡೆಸಿಕೊಟ್ಟು ತಮ್ಮ ಪ್ರತಿಭೆ ತೋರ್ಪಡಿಸಲು ವೇದಿಕೆಯನ್ನು ಕಲ್ಪಿಸಿಕೊಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕ್ರತೆ ಜಯಲಕ್ಷ್ಮಿ ಹಾಗೂ ಕೊರೊನ ವಾರಿಯರ್ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ವಾಣಿ ಭಾಸ್ಕರ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆನ್ ಲೈನ್ ಶಿಕ್ಷಣದ ಸಾಧಕ ಭಾದಕದ ಬಗ್ಗೆ ಭಾರತಿ ಶೇಷಪ್ಪ ರವರು ಅನ್ನೆಟ್ಸ್ ಗಳಿಗೆ ಮಾಹಿತಿಯನ್ನು ನೀಡಿದರು. ಆಡಳಿತ ವೈದ್ಯಾಧಿಕಾರಿ, ಡಾ. ಫಹೀನ್ ಮನೋರೋಗ ತಜ್ಞರು, ಹಾಗೂ ಡಾ. ಮುಷಾಕಿರ ಹುಸೈನ್, ಉಪ್ಪಿನಂಗಡಿ, ಇವರು ಮಕ್ಕಳ ಮಾನಸಿಕ ಸ್ಥಿತಿ ಗತಿಗಳ ಬಗ್ಗೆ ಅನ್ನೆಟ್ಸ್ ಗಳಿಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾರ್ಯದರ್ಶಿ ರೊ. ಕಿಶೋರ್, ಅನ್ಸ್ ಅಧ್ಯಕ್ಷೆ ರೊ. ಸವಿತಾ ಚಿತ್ತರಂಜನ್ ಶೆಟ್ಟಿ, ರೊ. ಶಾಂತರಾಜ್, ರೊ. ಚಿತ್ತರಂಜನ್ ಶೆಟ್ಟಿ, ರೊ. ದಯಾನಂದ ಶೆಟ್ಟಿ ಉಪಸ್ಥಿತರಿದ್ದರು. ರೊ. ಪಲ್ಲವಿ ಕಾರಂತ್ ನಿರೂಪಿಸಿದರು. ಜತೆ ಕಾರ್ಯದರ್ಶಿ ಜಶ್ಮಿ ಕಿಶೋರ್ ವಂದಿಸಿದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...