Monday, April 8, 2024

ಮಾಣಿ ಬಿಲ್ಲವ ಸಂಘದಲ್ಲಿ ಜಯ ಸಿ. ಸುವರ್ಣರಿಗೆ ನುಡಿನಮನ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಬಿಲ್ಲವ ಸಮಾಜದ ಮುಖಂಡ, ಉದ್ಯಮಿ, ಸಮಾಜಸೇವಕ ಜಯ ಸಿ. ಸುವರ್ಣರಿಗೆ ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ನುಡಿನಮನ ಕಾರ್ಯಕ್ರಮವನ್ನು ದಿನಾಂಕ 01-11-2020 ರಂದು ಸಂಜೆ ಮಾಣಿ ಬಿಲ್ಲವ ಸಮುದಾಯ ಭವನದಲ್ಲಿ ನಡೆಯಿತು.

ಜಯ ಸಿ. ಸುವರ್ಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಸಂಘದ ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ ಕಡೇಶಿವಾಲಯ ಜಯ ಸಿ.ಸುವರ್ಣರಿಗೆ ನುಡಿನಮನ ಸಲ್ಲಿಸಿದರು.” ಜಯ ಸಿ.ಸುವರ್ಣರು ಇಡೀ ಬಿಲ್ಲವ ಸಮುದಾಯದ ಮಹಾಶಕ್ತಿಯಾಗಿದ್ದವರು. ಉದ್ಯಮಿಯಾಗಿ ಹಲವಾರು ಸಂಘ ಸಂಸ್ಥೆಗಳ ಮೂಲಕ ಸಮಾಜಮುಖಿಯಾಗಿ ತೊಡಗಿಕೊಂಡಿದ್ದ ಅವರ ಜೀವನ ಆದರ್ಶಪ್ರಾಯವಾದುದು ” ಎಂದು ಅವರು ಬಣ್ಣಿಸಿದರು.

ಈ ಸಂದರ್ಭದಲ್ಲಿ ಮಾಣಿ ಬಿಲ್ಲವ ಸಂಘದ ಅಧ್ಯಕ್ಷರಾದ ಸುರೇಶ್ ಸೂರ್ಯ, ನಿಕಟಪೂರ್ವ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ಅನಂತಾಡಿ, ಉಪಾಧ್ಯಕ್ಷ ಸೋಮಪ್ಪ ಪೂಜಾರಿ,ಯುವವಾಹಿನಿ ಘಟಕದ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಲ, ಮಾಜಿ ಅಧ್ಯಕ್ಷರಾದ ಹರೀಶ್ ಬಾಕಿಲ, ರಾಜೇಶ್ ಬಾಬನಕಟ್ಟೆ, ಕಾರ್ಯದರ್ಶಿ ಶಿವರಾಜ್ ಅನಂತಾಡಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...