Tuesday, April 9, 2024

ಕ್ರೈಬ್ರಾಂಚ್ ಪೋಲೀಸರೆಂದು ನಂಬಿಸಿ ಬಂಗಾರ ದೋಚಿದ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಬಿಸಿರೋಡಿನ ಕೈಕಂಬದಲ್ಲಿ ಕ್ರೈಬ್ರಾಂಚ್ ಪೋಲೀಸರೆಂದು ನಂಬಿಸಿ ವ್ಯಕ್ತಿಯೋರ್ವರ ಬಂಗಾರ ದೋಚಿದ ಹಳೆಯ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಇರಾನಿ ಗ್ಯಾಂಗ್ ಸದಸ್ಯರಾದ ಮಹಾರಾಷ್ಟ್ರ ದ ಜಾಕೀರ್  ಹುಸೇನ್ (26) ಮತ್ತು ಕಂಬರ್ ರಹೀಂ ಮಿರ್ಜಾ (32)ಎಂಬವರು ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನಲ್ಲಿದ್ದಾರೆ.
2020 ರ ಜ.18 ರಂದು ಮಧ್ಯಾಹ್ನ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಮಿತ್ತಬೈಲು ಕೊಡಂಗೆ ನಿವಾಸಿ ಶಿವಪ್ರಸಾದ್ ಶರ್ಮ ಅವರು ಕೈಕಂಬದಲ್ಲಿ ನಡೆದುಕೊಂಡು ಹೋಗುವ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿ ಕರೆದು ನಾನು ಕ್ರೈಂ ಬ್ರಾಂಚ್ ಪೋಲೀಸ್ ಆಫೀಸರ್ ನಿಮ್ಮನ್ನು ಚೆಕ್ ಮಾಡಲು ಇದೆ ಎಂದು ಇವನ ಜೊತೆ ಬಂದ ಇನ್ನೊಬ್ಬ ಕೂಡ ಅದೇ ಮಾತು ಹೇಳಿ ನಂಬಿಸಿ ಅವರು ಐಡೆಂಟಿಟಿ ಕೇಳಿದಾಗ ಆಶೋಕ್ ಕುಮಾರ್ ಕ್ರೈಂ ಬ್ರಾಂಚ್ ಎಂದು ಬರೆದಿರುವ ಕಾರ್ಡು ತೋರಿಸಿದ ಆರೋಪಿಗಳು ಇವರ ಬಳಿಯಲ್ಲಿದ್ದ ಬಂಗಾರವನ್ನು ಮತ್ತು ಹಣವನ್ನು ಕೇಳಿ ಪಡೆದುಕೊಂಡು ಇದನ್ನು ಕರವಸ್ತ್ರದಲ್ಲಿ ಕಟ್ಟಿಕೊಡುತ್ತೇವೆ ಹೀಗೆ ತಿರುಗಾಡ ಬಾರದೆಂದು ಹೇಳಿ ಪಡದುಕೊಂಡಿದ್ದರು.
ಬಳಿಕ ಕರವಸ್ತ್ರದಲ್ಲಿ ಕಟ್ಟಿಕೊಂಡ ಲಕ್ಷಾಂತರ ರೂ ಮೌಲ್ಯದ ಬಂಗಾರ ಮತ್ತು ಹಣವನ್ನು ಹಿಡಿದುಕೊಂಡು ಬೈಕಿನಲ್ಲಿ ಆರೋಪಿಗಳು ಪರಾರಿಯಾಗಿದ್ದರು.
ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದೇ ರೀತಿ ಕುಂದಾಪುರ ಮತ್ತು ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಈ ಪ್ರಕರದಣಲ್ಲಿ ಉಡುಪಿ ನಗರ ಪೋಲೀಸರು ಇರಾನಿ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬಂಟ್ವಾಳದ ಪ್ರಕರಣದ ಬಗ್ಗೆ ಬಾಯಿಬಿಟ್ಟಿದ್ದಾರೆ.
ಬಳಿಕ ಹಿರಿಯಡ್ಕ ಕಾರಾಗೃಹ ದಲ್ಲಿದ್ದ ಆರೋಪಿಗಳನ್ನು
ಇಲ್ಲಿನ ಪ್ರಕರಣದ ವಿಚಾರಣೆಗಾಗಿ ಬಂಟ್ವಾಳ ನಗರ ಠಾಣೆಗೆ ಆರೋಪಿಗಳನ್ನು ಕರೆತಂದಿದ್ದು ಆರೋಪಿಗಳ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಮೇಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಅಪರಾಧ ವಿಭಾಗದ ಎಸ್.ಐ. ಕಲೈಮಾರ್ ಪಿ. ಆರೋಪಿಗಳನ್ನು ಪೋಲೀಸ್ ಕಸ್ಟಡಿಗೆ ಪಡೆದು ತನಿಖೆಗೆ ಒಳಪಡಿಸಿರುತ್ತಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...