Friday, April 5, 2024

ಬೆಳ್ತಂಗಡಿಯಲ್ಲಿ ದೀಪಾವಳಿ ದೋಸೆ ಹಬ್ಬಕ್ಕೆ ಚಾಲನೆ

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ದೀಪಾವಳಿ ದೋಸೆ ಹಬ್ಬವನ್ನು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು. ತುಳುನಾಡಿನ ಸಂಪ್ರದಾಯದ ದೀಪಾಳಿಯ ವಿಶೇಷ ದೋಸೆ ಹಬ್ಬವನ್ನು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ದೋಸೆ ಹಂಚುವ ಮೂಲಕ ದೋಸೆ ಹಬ್ಬಕ್ಕೆ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ತ್ ಕಾಮತ್ ಚಾಲನೆ ನೀಡಿದರು. ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ದೋಸೆ ಹೊಯ್ಯುವ ಮೂಲಕ ದೋಸೆ ವಿತರಣೆಗೆ ಚಾಲನೆ ನೀಡಿದರು.


ಸಂಜೆ ೬ ಗಂಟೆಯವರೆಗೂ ದೀಪಾವಳಿ ದೋಸೆ ಹಬ್ಬದ ಮೂಲಕ ೫ ಸಾವಿರಕ್ಕೂ ಹೆಚ್ಚು ದೋಸೆ ಹಂಚುವ ಕಾರ್ಯ ನಡೆಯಲಿದ್ದು, ಆ ಬಳಿಕ ಸಂಜೆ ೬ ಗಂಟೆಗೆ ಗೋಪೂಜೆ ಉತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ಜ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಯಶವಂತ್ ಗೌಡ, ಸದಸ್ಯರು, ಬೆಳ್ತಂಗಡಿ ಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...