Saturday, April 6, 2024

ಪುರಸಭೆ ಅಧ್ಯಕ್ಷ ಯಾರಾಗುತ್ತಾರೆ..?

ಕಳೆದ ಎರಡು ವರ್ಷಗಳಿಂದ ಅಧ್ಯಕ್ಷ ಉಪಾಧ್ಯಕ್ಷರಿಲ್ಲದ ಸೊರಗಿದ್ದ ಬಂಟ್ವಾಳ ಪುರಸಭೆಗೆ ನಾಳೆ ಚುನಾವಣೆ ಭಾಗ್ಯ!

ಪುರಸಭೆಯ ಅಧ್ಯಕ್ಷ ಯಾರಾಗುತ್ತಾರೆ? ಯಾರಿಗೆ ಒಲಿಯುತ್ತೆ ಅಧ್ಯಕ್ಷ ಪಟ್ಟ? ಕಾಂಗ್ರೇಸ್ ನ ಪಾಲಾಗುತ್ತಾ..?ಬಿಜೆಪಿಯ ಪಾಲಾಗುತ್ತಾ..? ನಾಳೆ ಮಧ್ಯಾಹ್ನದವರೆಗೂ ವೆರಿ ಇಂಟರೆಸ್ಟಿಂಗ್ ಪಾಲಿಟಿಕ್ಸ್ ಇದೆ.

ಬಂಟ್ವಾಳ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಕೊನೆಗೂ ದಿನ ಕೂಡಿ ಬಂದಿದೆ. ಮೂರು ಪಕ್ಷಕ್ಕೂ ಬಹುಮತವಿಲ್ಲದೆ ಬಹಳ ಕುತೂಹಲ ಸೃಷ್ಟಿಸಿರುವ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನ.7 ರಂದು ಚುನಾವಣೆ ನಡೆಯಲಿದೆ.
ಚುನಾವಣೆಯಲ್ಲಿ ಯಾರು ಅಧಿಕಾರ ಹಿಡಿಯಲಿದ್ದಾರೆ ಎನ್ನುವುದೇ ವೆರಿ ಇಂಟರೆಸ್ಟಿಂಗ್.
ಬಂಟ್ವಾಳ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾತಿ ನಿಗದಿಯಾಗಿದೆ. ಒಟ್ಟು 27 ಸದಸ್ಯ ಬಲದ ಪುರಸಭೆಗೆ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 12, ಬಿಜೆಪಿ 11 ಹಾಗೂ ಎಸ್‌ಡಿಪಿಐ 4 ಸ್ಥಾನಗಳನ್ನು ಪಡೆದಿದೆ. ಬಿಜೆಪಿಗೆ ಶಾಸಕರು ಹಾಗೂ ಸಂಸದರ ಮತಗಳು ಸೇರ್ಪಡೆಯಾಗಲಿವೆ.
ಅಧ್ಯಕ್ಷ ಸ್ಥಾನಕ್ಕೆ ಮೂರು ಪಕ್ಷಗಳ ಎಲ್ಲ ಸದಸ್ಯರು ಅರ್ಹರಾಗಿದ್ದು, ಬಿಜೆಪಿಯು ಈಗಾಗಲೇ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಅವರು ಅಭ್ಯರ್ಥಿ ಎಂದು ಘೋಷಿಸಿದೆ. ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಕುರಿತು ಘೋಷಣೆ ಮಾಡಿಲ್ಲ. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಜೆಸಿಂತಾ ಡಿ’ಸೋಜಾ ಹಾಗೂ ಬಿಜೆಪಿಯಿಂದ ಮೀನಾಕ್ಷಿ ಗೌಡ ಅವರು ಸ್ಪರ್ಧಿಸುವ ಕುರಿತು ಘೋಷಣೆ ಮಾಡಿದ್ದು, ಈ ಇಬ್ಬರು ಮಾತ್ರ ಉಪಾಧ್ಯಕ್ಷ ಸ್ಥಾನದ ಮೀಸಲಾತಿಗೆ ಅರ್ಹತೆಯನ್ನು ಪಡೆದಿದ್ದಾರೆ.
ಪ್ರಸ್ತುತ ಯಾರಿಗೂ ಕೂಡ ಬಹುಮತ ಇಲ್ಲದೆ ಇರುವುದರಿಂದ ಯಾರು-ಯಾರಿಗೆ ಬೆಂಬಲ ನೀಡುತ್ತಾರೆ, ತಟಸ್ಥರಾಗುತ್ತಾರೆಯೂ ಅಥವಾ ಚುನಾವಣೆಗೆ ಗೈರಾಗುತ್ತಾರೆಯೇ ಎಂಬೆಲ್ಲ ಕುತೂಹಲಗಳನ್ನು ಸೃಷ್ಟಿಸಿದೆ. ಮೂರು ಪಕ್ಷಗಳು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ತಿಳಿಸಿದ್ದು, ಹೀಗಾಗಿ ಅಧ್ಯಕ್ಷ ಸ್ಥಾನದ ಸ್ಪರ್ಧೆಯೇ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಕೊನೆಯ ಕ್ಷಣದಲ್ಲಿ ಯಾವ ರೀತಿಯ ರಾಜಕೀಯ ಹೈಡ್ರಾಮಾ ನಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ:

ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಎಸ್‌ಡಿಪಿಐ ಪಕ್ಷವು ಸ್ಪರ್ಧಿಸಲಿದ್ದು, ಯಾರು ಅಭ್ಯರ್ಥಿ ಎನ್ನುವುದು ಇನ್ನೂ ಅಂತಿಮಗೊಂಡಿಲ್ಲ. ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಪಕ್ಷದಲ್ಲಿ ಅಭ್ಯರ್ಥಿಗಳಿಲ್ಲ. ಚುನಾವಣೆಯಲ್ಲಿ ಬೇರೆ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಯಾವುದೇ ಚರ್ಚೆ ಮಾಡಿಲ್ಲ.

ಮುನೀಶ್‌ ಆಲಿ, ಅಧ್ಯಕ್ಷರು,
ಎಸ್‌ಡಿಪಿಐ ಪುರಸಭಾ ಸಮಿತಿ.

ಅಭ್ಯರ್ಥಿಗಳು ಅಂತಿಮ:

ಬಂಟ್ವಾಳ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀನಾಕ್ಷಿ ಗೌಡ ಅಭ್ಯರ್ಥಿಗಳೆಂದು ಪಕ್ಷ ತೀರ್ಮಾನಿಸಿದ್ದು, ಸದಸ್ಯರ ಜತೆಗೆ ಶಾಸಕರು-ಸಂಸದರು ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾರ ಜತೆಗೂ ಹೊಂದಾಣಿಕೆಯ ಕುರಿತು ತೀರ್ಮಾನ ತೆಗೆದುಕೊಂಡಿಲ್ಲ. ಎರಡೂ ಸ್ಥಾನಗಳಿಗೂ ಬಿಜೆಪಿ ಪಕ್ಷ ಸ್ಪರ್ಧಿಸಲಿದೆ.

-ದೇವಪ್ಪ ಪೂಜಾರಿ, ಅಧ್ಯಕ್ಷರು, ಬಂಟ್ವಾಳ ಕ್ಷೇತ್ರ ಬಿಜೆಪಿ.

ಹೈಕಮಾಂಡ್‌ ತೀರ್ಮಾನ:

ಪುರಸಭೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸೀಟು ನೀಡಿದ್ದು, ಹೀಗಾಗಿ ಯಾರ ಜತೆಯೂ ಹೊಂದಾಣಿಕೆ ಇಲ್ಲದೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದೇವೆ. ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಯಾರು ಎಂಬುದನ್ನು ಹೈಕಮಾಂಡ್‌ ತೀರ್ಮಾನ ಮಾಡಲಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಜೆಸಿಂತಾ ಡಿ’ಸೋಜಾ ಅವರು ಸ್ಪರ್ಧಿಸಲಿದ್ದಾರೆ. ಅಧಿಕಾರ ಸಿಕ್ಕರೆ ಉತ್ತಮ. ಆಡಳಿತ ಇಲ್ಲದೇ ಇದ್ದರೆ ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡಲಿದ್ದೇವೆ.
ಬೇಬಿ ಕುಂದರ್‌, ಅಧ್ಯಕ್ಷ ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌

ಕಾಂಗ್ರೆಸ್ -ಬಿಜೆಪಿ ಅಧಿಕಾರಕ್ಕೆ ಮಾಸ್ಟರ್ ಪ್ಲಾನ್
ಪುರಸಭೆಯ ಅಧಿಕಾರ ಹಿಡಿಯೋದಕ್ಕೆ ಬಿಜೆಪಿ ಮತ್ತು ಕಾಂಗ್ರೇಸ್ ಪಕ್ಷ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಆದರೆ ಎರಡು ಪಕ್ಷಗಳಿಗೆ ನಿರ್ಣಾಯಕ ವಾಗಿರುವ ಎಸ್.ಡಿ.ಪಿ.ಐ.ಮಾತ್ರ ಒಳಗೊಳಗೆ ನಗಲಾರಂಬಿಸಿದೆ. ಜೊತೆಗೆ ಅವರ ಅವಶ್ಯಕತೆನ್ನು ರಾಜಕೀಯ ವಾಗಿ ಹೇಗೆ ಲಾಭ ಗಳಿಸಿಬಹುದು ಎಂಬ ಚಿಂತನೆ ಮಾಡುತ್ತಿದೆ.

ರಾತ್ರಿ ಬೆಳಗಾಗುವುದರಲ್ಲಿ ಬದಲಾಗುತ್ತಾ ರಾಜಕೀಯ ?
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಸದಸ್ಯರನ್ನು ಹೊರಹೋಗದಂತೆ ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಕೊನೆಯ ಕ್ಷಣದಲ್ಲಿ ರೆಸಾರ್ಟ್ ರಾಜಕೀಯ ಅಥವಾ ಪಕ್ಷಾಂತರ ರಾಜಕೀಯ ನಡೆದರೆ ರಾಜಕೀಯ ವಾಗಿ ಮುಖಂಡರು ತಲೆತಗ್ಗಿಸುವ ಪರಿಸ್ಥಿತಿ ಉಂಟಾಗುತ್ತೆ ಎಂಬ ಕಾರಣಕ್ಕೆ ಗುಟ್ಟಾಗಿ ಸದಸ್ಯರನ್ನು ಲಾಕ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೆ ಪಕ್ಷಾಂತರ ಪಕ್ಷವಿರೋಧಿ ಚಟುವಟಿಕೆ ಗಳಿಗೆ ಅವಕಾಶ ವಿರದಂತೆ ಎಚ್ಚರಿಕೆ ವಹಿಸಿದ್ದಾರೆ. ಆದರೆ ಆಧ್ಯಕ್ಷ ಆಕಾಂಕ್ಷಿಗಳು ಮಾತ್ರ ಎರಡು ಪಕ್ಷದಲ್ಲಿ ಇದ್ದು ರಾತ್ರಿಯಿಂದ ಬೆಳಗಾಗುವ ವೇಳೆ ರಾಜಕೀಯ ಚಿತ್ರಣ ಬದಲಾಗಬಹುದು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...