Saturday, April 6, 2024

“ಹಸಿರು ಪಟಾಕಿ” ಹಚ್ಚಲು ಅವಕಾಶ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು : ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ನಿರ್ಧಾರವನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಟಾಕಿ ಬಳಕೆ, ಮಾರಾಟಕ್ಕೆ ”ಗ್ರೀನ್‌ ಸಿಗ್ನಲ್”‌ ನೀಡಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ”ಹಸಿರು ಪಟಾಕಿ”ಗಳನ್ನು ಮಾರಾಟ ಮಾಡಲು ಮತ್ತು ಬಳಸಲು ಜನರಿಗೆ ಅವಕಾಶವಿದೆ ಎಂದು ಒಂದು ಪುಟದ ಪತ್ರದ ಮೂಲಕ ಮುಖ್ಯಮಂತ್ರಿ ಕಚೇರಿ ಶುಕ್ರವಾರ ತಿಳಿಸಿದೆ.
“ಈ ದೀಪಾವಳಿಯ ಸಮಯದಲ್ಲಿ ನಾವು ಪಟಾಕಿಗಳನ್ನು ನಿಷೇಧಿಸಲು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಆದರೆ ಜನರು ಬಯಸಿದರೆ ಹಸಿರು ಪಟಾಕಿಗಳನ್ನು ಬಳಸಬಹುದು” ಎಂದು ಆ ಪತ್ರದಲ್ಲಿ ತಿಳಿಸಲಾಗಿದೆ. ಅದಲ್ಲದೇ ಜನರು ಸರಳವಾಗಿ ಆಚರಣೆ ಮಾಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
“ನಾವು ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾತ್ರ ಇಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ. ಈ ಹಿಂದೆ ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.
ಆರೋಗ್ಯ ತಜ್ಞರೊಂದಿಗೆ ಸರ್ಕಾರ ಈ ಬಗ್ಗೆ ಚರ್ಚಿಸಿದೆ. ಈ ಬಾರಿ ಪಟಾಕಿ ಬಳಕೆ ಒಳ್ಳೆಯದಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದೇವೆ ಎಂದಿದ್ದರು. “ರಾಜಸ್ಥಾನ, ಒಡಿಶಾ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಈಗಾಗಲೇ ಪಟಾಕಿಗಳನ್ನು ನಿಷೇಧಿಸಲು ನಿರ್ಧರಿಸಿದೆ” ಎಂದು ಕೂಡಾ ಈ ಪತ್ರದಲ್ಲಿ ಉಲ್ಲೇಖಿಸಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...