Wednesday, April 10, 2024

ಧರ್ಮಸ್ಥಳದಲ್ಲಿ ‘ವಾತ್ಸಲ್ಯ’ ಸಮಾಜ ಬಾಂಧವರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮಕ್ಕೆ ಚಾಲನೆ: ವಾತ್ಸಲ್ಯ ಕಿಟ್ ವಿತರಣೆ

ಉಜಿರೆ: ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು.
ಅವರು ಇಂದು ನ. 25ರಂದು ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ವಾತ್ಸಲ್ಯ ಸಮಾಜ ಬಾಂಧವರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.
ಯಾವುದೇ ವಸ್ತು ಅಥವಾ ಪ್ರಾಣಿಗೆ ಬೆಲೆ ಕಟ್ಟಬಹುದು.ಆದರೆ ಮನುಷ್ಯನಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಬಡತನ ಎಂಬುದು ಶಾಪವಲ್ಲ. ಅವರವರ ಕರ್ಮವೂ ಅಲ್ಲ. ಸಹಾನುಭೂತಿಯಿಂದ ಮಾನವೀಯತೆಯೊಂದಿಗೆ ನೊಂದವರಿಗೆಅಭಯ ನೀಡಿ ನೆಮ್ಮದಿಯ ಜೀವನ ನಡೆಸಲು ನೆರವಾಗುವುದೇ ಮಾನವ ಧರ್ಮ ಎಂದು ಅವರು ಅಭಿಪ್ರಾಯಪಟ್ಟರು.


ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ ನೀಡುವುದೇ ವಾತ್ಸಲ್ಯ ಯೋಜನೆಯ ಉದ್ದೇಶವಾಗಿದೆ.
ಹಿರಿಯರು ಮಾತಿನಲ್ಲಿ ಶಾಪ ಕೊಡಬೇಕಾಗಿಲ್ಲ. ಮನದಲ್ಲಿ ನೊಂದುಕಣ್ಣೀರು ಹಾಕಿದರೂ, ಅವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಆಧುನಿಕ ಸಮಾಜದಲ್ಲಿ ನಿರ್ಗತಿಕರನ್ನು, ರೋಗಿಗಳನ್ನು, ವೃದ್ಧರನ್ನು ಕಡೆಗಣಿಸುವುದು ಸಾಮಾನ್ಯವಾಗಿದೆ.ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ ವಾತ್ಸಲ್ಯ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.


ಈ ವರ್ಷ ನಿರ್ಗತಿಕರಿಗೆ ಹತ್ತು ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.
ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬೆಂಗಳೂರಿನ ವಿ.ರಾಮಸ್ವಾಮಿ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್. ಮಂಜುನಾಥ್ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯ್ಸ್‌ ಧನ್ಯವಾದವಿತ್ತರು. ನಿರ್ದೇಶಕಿ ಮಮತಾ ರಾವ್‌ ಕಾರ್ಯಕ್ರಮ ನಿರ್ವಹಿಸಿದರು.

ಮುಖ್ಯಾಂಶಗಳು:
1. ರಾಜ್ಯದಲ್ಲಿ 10,461 ಮಂದಿಗೆ ವರ್ಷಕ್ಕೆ 8 ಕೋಟಿರೂ. ಮಾಸಾಶನ ವಿತರಣೆ ಮಾಡಲಾಗುತ್ತಿದೆ.
2. ಬುಧವಾರ ಒಂದು ಕೋಟಿ ರೂ. ವೆಚ್ಛದಲ್ಲಿ ರಾಜ್ಯದೆಲ್ಲೆಡೆ ಏಕ ಕಾಲದಲ್ಲಿ 7,300 ಕಿಟ್ ವಿತರಣೆ.
3. ಅಡುಗೆ ಪಾತ್ರೆಗಳು, ಚಾಪೆ, ಹೊದಿಕೆ ಮೊದಲಾದ ಮೂಲಭೂತ ಅವಶ್ಯಕ ವಸ್ತುಗಳು ಕಿಟ್‌ನಲ್ಲಿ ಮನೆ ಬಾಗಿಲಿಗೆ ಒದಗಿಸಲಾಗುವುದು.
4. ಸ್ವಾವಲಂಬಿ ಹಾಗೂ ಸ್ವಾಭಿಮಾನಿಗಳಾಗಿ ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು.
5. ವಾತ್ಸಲ್ಯ ಕಿಟ್ ಸಾಗಿಸುವ ಟ್ರಕ್‌ಗಳಿಗೆ ಚಾಲನೆ ನೀಡಲಾಯಿತು.

 

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...