Sunday, April 7, 2024

ಕನ್ನಡ ರಾಜ್ಯೋತ್ಸವ ಆಚರಣೆ

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿಭಾಗದ ಜಂಟಿ ಅಶ್ರಯದಲ್ಲಿ 65ನೇ ಕನ್ನಡ ರಾಜ್ಯೋತ್ಸವನ್ನು ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕನ್ನಡ ಮಾತೆ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಸಂಸ್ಥೆಯ ಉಪಪ್ರಾಂಶುಪಾಲೆ ಶ್ರೀದೇವಿ ಪಿ. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. ಆಶಯ ಭಾಷಣ ಮಾಡಿದ ಕನ್ನಡ ಅಧ್ಯಾಪಕ ಅನಂತ ಪದ್ಮನಾಭ ಕನ್ನಡನಾಡಿನ ಉದಯದಿಂದ ಪ್ರಾರಂಭಿಸಿ ಇಂದು ಕರ್ನಾಟಕದಲ್ಲಿ ಕನ್ನಡದ ಸ್ಥಿತಿಗತಿಯವರೆಗೆ ಸಿಂಹಾವಲೋಕನ ನಡೆಸಿ, ಕನ್ನಡ ಪರ ಕಾಳಜಿಯನ್ನು ನಾವು ನೀವೆಲ್ಲ ಬೆಳೆಸಿಕೊಳ್ಳೋಣ, ಕನ್ನಡವನ್ನು ಉಳಿಸುವ ಬೆಳೆಸುವ ಕಾರ್ಯದಲ್ಲಿ ಕಿಂಚಿತ್ತು ಕೊಡುಗೆ ನಮ್ಮದಿರಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು. ಅತಿಥಿಯಾಗಿ ಆಗಮಿಸಿದ ಸ್ಥಳೀಯ ವಿದ್ಯಾಭಿಮಾನಿ ರಾಧಾಕೃಷ್ಣ ತಂತ್ರಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಕಾಲೇಜು ವಿಭಾಗದ ಭೌತಶಾಸ್ತ್ರ ಉಪನ್ಯಾಸಕ ರವಿಚಂದ್ರ ಮಯ್ಯ ತಾವು ಸ್ವತಃ ಒಬ್ಬ ಕನ್ನಡ ಪ್ರೇಮಿಯಾಗಿದ್ದು, ಪ್ರತಿಯೊಬ್ಬರೂ ಕನ್ನಡ ಸಾಹಿತ್ಯಗಳ ಅಧ್ಯಯನದ ಮೂಲಕ ಕನ್ನಡ ಪ್ರೇಮಿಯಾಗಿ ಎಂಬ ಸಂದೇಶ ನೀಡಿದರು.
ಶಾಲಿನಿ ತಂತ್ರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ದೇವದಾಸ ಕೆ. ವಂದಿಸಿದರು. ಶಿಕ್ಷಕಿ ಮರ್ಲಿನ್ ಅವರ ಮಾರ್ಗದರ್ಶನದಲ್ಲಿ ಎಲ್ಲಾ ಶಿಕ್ಷಕರು ಸಾಮೂಹಿಕವಾಗಿ ಕೆಲವು ಕನ್ನಡ ಗೀತೆಗಳನ್ನು ಹಾಡಿದರು. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯ ವಿಜೇತರನ್ನು ಪ್ರಶಂಸಿಸಲಾಯಿತು.

 

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...