Wednesday, April 10, 2024

ದುಷ್ಕರ್ಮಿಗಳಿಂದ ಹಲ್ಲೊಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಛಾಯಾಗ್ರಾಹಕ ದಿನೇಶ್ ಕೊಟ್ಟಿಂಜ ಅವರ ಚಿಕಿತ್ಸೆಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ 1 ಲಕ್ಷ ರೂ. ನೆರವು

ಬಂಟ್ವಾಳ: ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫರಂಗಿಪೇಟೆ ಕೊಟ್ಟಿಂಜ ನಿವಾಸಿ ಛಾಯಾಚಿತ್ರ ಗ್ರಾಹಕ, ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಕೊಟ್ಟಿಂಜ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆ ನೆರವಿಗಾಗಿ ವೈಯಕ್ತಿಕ ನೆಲೆಯಲ್ಲಿ ರೂ. ಲಕ್ಷ ನೀಡಿದ್ದಾರೆ.

ಅ.28 ರಂದು ಬುಧವಾರ ರಾತ್ರಿ 7.30 ಸುಮಾರಿಗೆ ಪುದು ಗ್ರಾಮದ ಕೊಟ್ಟಿಂಜೆ ನಿವಾಸಿ ದಿನೇಶ್ ಶೆಟ್ಟಿ ಅವರ ಫರಂಗಿಪೇಟೆ ಸ್ಟುಡಿಯೋ ಕ್ಕೆ ನಾಲ್ಕು ಮಂದಿ ನುಗ್ಗಿ ತಲೆ ಹಾಗೂ ಹೊಟ್ಟೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದರು.
ಘಟನೆಯಿಂದ ಗಂಭೀರ ವಾಗಿ ಗಾಯಗೊಂಡ ದಿನೇಶ್ ಶೆಟ್ಟಿ ಅವರು ಮಂಗಳೂರು ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಸಂಜೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಪುದು ಜಿ.ಪಂ.ಸದಸ್ಯ ರವೀಂದ್ರ ಕಂಬಳಿ ಗಣೇಶ್ ರೈ ಮಾಣಿ ಮತ್ತಿತರರು ಆಸ್ಪತ್ರೆಗೆ ಬೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಜೊತೆಗೆ ಚಿಕಿತ್ಸೆಯ ನೆರವಿಗಾಗಿ ಶಾಸಕರು ಜಿ.ಪಂ.ಸದಸ್ಯ ರವೀಂದ್ರ ಕಂಬಳಿ ಅವರ ಮೂಲಕ ರೂ 1. ಲಕ್ಷ ಹಣವನ್ನು ನೀಡಿದ್ದಾರೆ.
ಆಸ್ಪತ್ರೆಯ ಮುಖ್ಯಸ್ಥ ಡಾ| ಪ್ರಶಾಂತ್ ಮಾರ್ಲ ಅವರ ಜೊತೆ ಇವರ ಆರೋಗ್ಯದ ಬಗ್ಗೆ ವಿಚಾರಿಸಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಚರ್ಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...