Sunday, October 22, 2023

ದೇವಸ್ಥಾನಗಳ ಸಂಪರ್ಕ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ: ಶಾಸಕ ರಾಜೇಶ್ ನಾಯ್ಕ್

Must read

ಬಂಟ್ವಾಳ: ದೇವಸ್ಥಾನಗಳ ಸಂಪರ್ಕ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಶಾಸಕರ ವಿಶೇಷ ಅನುದಾನ 20 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾದ ತಾಲೂಕಿನ ಕುಡಂಬೆಟ್ಟು ಗ್ರಾಮದ ಶ್ರೀ ಮುಖ್ಯಪ್ರಾಣ ದೇವಸ್ಥಾನ ಉರುಡಾಯಿ ರಸ್ತೆ ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನೇಕ ಧಾರ್ಮಿಕ ಕೇಂದ್ರಗಳ ರಸ್ತೆಯ ಜೊತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದವು, ಎಲ್ಲಾ ಕ್ಷೇತ್ರಗಳನ್ನು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಆಭಿವೃದ್ದಿಗೆ ಸರಕಾರದ ಮಟ್ಟದ ಅನುದಾನವನ್ನು ನೀಡುವ ಭರವಸೆ ನೀಡಿದರು.

ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಅಭಿವೃದ್ಧಿಯ ಚಿಂತನೆಯಿಂದ ಕೆಲಸದ ಜೊತೆ ರಾಜಕೀಯವನ್ನು ಶಾಸಕರು ಮಾಡುತ್ತಿದ್ದಾರೆ. ಪಕ್ಷ ಸಂಘಟನೆಯ ಮೂಲಕ ಹಾಗೂ ಶಾಸಕರು ಅಭಿವೃದ್ಧಿ ಯ ಮೂಲಕ ವಿರೋಧ ಪಕ್ಷಗಳಿಗೆ ಉತ್ತರ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿ ಗಾಗಿ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಪಕ್ಷದ ಸದಸ್ಯ ರ ಆಯ್ಕೆ ಮಾಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ ಮಾತನಾಡಿ, ಶಾಸಕರ ಅವಧಿಯಲ್ಲಿ ಗ್ರಾಮೀಣ ಭಾಗದ ಮೂಲೆಮೂಲೆಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಓರ್ವ ಕೃಷಿಕನಾಗಿ ಗ್ರಾಮದ ಅಭಿವೃದ್ಧಿ ಹೇಗೆ ಎಂಬುದರ ಚಿಂತನೆಯಿಂದ ಕೆಲಸ ಮಾಡಿ ಗ್ರಾಮದ ಜನರ ಮನಸ್ಸು ಗೆದ್ದಿದ್ದಾರೆ.

ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಮಾತನಾಡಿ, ರಾಜೇಶ್ ನಾಯ್ಕ್ ಅವರು ಶಾಸಕರಾದ ಬಳಿಕ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಪೂರಕವಾದ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಆಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ದೇವಸ್ಥಾನದ ಆಡಳಿತ ಮೋಕ್ತೇಸರ ಜಯರಾಮ ಕುಲಾಲ್, ಅರ್ಚಕ ನಾರಾಯಣ ಶಿಬಿರಾಯ ಮತ್ತಿತರು ಉಪಸ್ಥಿತರಿದ್ದರು.

ಸುರೇಶ್ ನಾಯಕ್ ಸ್ವಾಗತಿಸಿ, ಮಹಾಬಲ ಕುಲಾಲ್ ವಂದಿಸಿದರು.

More articles

Latest article