Tuesday, April 16, 2024

ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ವತಿಯಿಂದ 2.35 ಕೋಟಿ ರೂ. ವೆಚ್ಚದಲ್ಲಿ ಅರಳ ಗ್ರಾಮದ ಮುಲಾರಪಟ್ನ ಆಝಾದನಗರದಲ್ಲಿ ನಿರ್ಮಾಣವಾಗಲಿರುವ ಮೌಲನಾ ಆಝಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ (ನ.17) ಮಂಗಳವಾರ ಜರುಗಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದು, ಅಲ್ಪಸಂಖ್ಯಾತ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮುಲಾರಪಟ್ನದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದ್ದು, ಮುಂದಿನ ಶಿಕ್ಷಣ ಅವಧಿಯಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದರು.
ಬಂಟ್ವಾಳ- ಮಂಗಳೂರು ಸಂಪರ್ಕಿಸುವ ಮುಲಾರಪಟ್ನ ಸೇತುವೆ ಕುಸಿತದಿಂದ ಈ ಭಾಗದ ಜನರಿಗೆ ತೊಂದರೆಯಾಗಿದ್ದು, ಹೆಚ್ಚಿನ ಮುತುವರ್ಜಿ ವಹಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕಾಮಗಾರಿ ಆರಂಭಗೊಂಡಿದ್ದು, ಮುಂದಿನ ಮೇ ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಜಿ.ಪಂ. ಸದಸ್ಯ ಎಂ.ತುಂಗಪ್ಪ ಬಂಗೇರ ಮುಖ್ಯ ಅತಿಥಿಯಾಗಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಜೆ.ಎಚ್.ಎಮ್. ಫೌಂಡೇಷನ್ ಅಧ್ಯಕ್ಷ ಹಂಝ, ನಿರ್ಮಿತಿ ಕೇಂದ್ರದ ಕಾರ್ಯಕಾರಿಣಿ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಹಮ್ಮದ್, ಹಾಜಬ್ಬ, ಜುಮಾ ಮಸೀದಿ ಅಧ್ಯಕ್ಷ ಗುತ್ತಿಗೆದಾರ ಅಶ್ರಪ್, ಸ.ಹಿ. ಪ್ರಾಥಮಿಕ ಉರ್ದು ಶಾಲೆಯ ಮುಖ್ಯ ಶಿಕ್ಷಕಿ ಶಾಲಾ ಸಮೀನಾ ಅಖ್ತರ್, ಉರ್ದು ಶಾಲಾ ಮತ್ತು ಮೌಲಾನಾ ಆಜಾದ್ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಅಲ್ಪ ಸಂಖ್ಯಾತ ಇಲಾಖಾ ಕಲ್ಯಾಣಾಧಿಕಾರಿ ಖಾದರ್ ಶಾ ಸ್ವಾಗತಿಸಿ, ಶಿಕ್ಷಕಿ ಕುಸುಮಾ ವಂದಿಸಿದರು. ಮೌಲನಾ ಅಂಗ್ಲ ಮಾಧ್ಯಮ ಮುಖ್ಯಶಿಕ್ಷಕ ಮಹಮ್ಮದ್ ಹನೀಫ್ ಕಾರ್ಯಕ್ರಮ ನಿರೂಪಿಸಿದರು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...