Saturday, April 6, 2024

ಮಸೀದಿಗಳಲ್ಲಿ ಇನ್ಮುಂದೆ ಧ್ವನಿವರ್ದಕ ಬಳಸುವಂತಿಲ್ಲ: ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ ಜಾರಿ

ಬೆಂಗಳೂರು: ರಾಜ್ಯಾದ್ಯಾಂತ ಇರುವ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕಗಳ ನಿ‌ಷೇಧಿಸಿ ತೆರವುಗೊಳಿಸಲು ಸೂಚಿಸಬೇಕು ಎಂದು ವಕೀಲ ಹರ್ಷ ಮುತಾಲಿಕ್ ಅವರು ಪೊಲೀಸ್ ಮಹಾ ನಿದೇರ್ಶಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಡೈರೆಕ್ಟರ್‍ ಜನರಲ್ ಮತ್ತು ಇನ್ಸ್ ಪೆಕ್ಟರ್‍ ಜನರಲ್ ಆಫ್ ಪೊಲೀಸ್ ರವರ ಕಛೇರಿಯಿಂದ ಆದೇಶವೊಂದು ಹೊರಬಿದ್ದಿದ್ದು, ರಾಷ್ಟ್ರದ್ಯಂತ ಗಮನ ಸೆಳೆಯುವಂತೆ ಮಾಡಿದೆ.
ರಾಜ್ಯದಾದ್ಯಂತ ನಮಾಜ್ ನ ಪ್ರಸಾರ ಮಾಡುತ್ತಿರುವುದು ಸರ್ವೇಸಾಮಾನ್ಯವಾಗಿದ್ದು, ಈ ರೀತಿಯ ಅನಧಿಕೃತ ಧ್ವನಿವರ್ಧಕಗಳ ಬಳಕೆ ಹಾಗೂ ಮೈಕ್ರೋಫೋನ್ ಬಳಕೆಯನ್ನು ಮಾಡಬಾರದೆಂದು ಈಗಾಗಲೇ ಘನ ಸರ್ವೋಚ್ಛ ನ್ಯಾಯಾಲಯವು ಆದೇಶವನ್ನು ಮಾಡಿದೆ. ಆದರೆ ದುರದೃಷ್ಟವಶಾತ್ ಇಲ್ಲಿಯವರೆಗೆ ಯಾವುದೇ ಒಂದು ಮಸೀದಿಗಳು ಅವುಗಳನ್ನು ತೆಗೆದಿರುವುದಿಲ್ಲ ಮತ್ತು ಈ ಘನ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪೊಲೀಸ್ ಇಲಾಖೆಯವರಾಗಲೀ ಅಥವಾ ಸಂಬಂಧಿಸಿದ ಅದಿಕಾರಿಗಳಾಗಲೀ ಇಲ್ಲಯವೆರೆಗೆ ಯಾವುದೇ ರೀತಿ ಕ್ರಮಗಳನ್ನು ತೆಗೆದುಕೊಂಡಿರುವುದಿಲ್ಲ. ಇತ್ತಿಚಿಗೆ ಘನ ಅಲಹಾಬಾದ್ ಉಚ್ಛ ನ್ಯಾಯಾಲಯ ಕೂಡ ಈ ವಿಚಾರಕ್ಕೆ ಸಂಬಂಧಿಸಿದಂತೆ, ಧ್ವನಿವರ್ಧಕಗಳ ಬಳಕೆ ಮಾಡಬಾರದೆಂದು ಆದೇಶ ಹೊರಡಿಸಿತ್ತು.
ನಮ್ಮ ರಾಜ್ಯದಲ್ಲಿ ನಮಾಜ್ ನ ಉಪದ್ರವ ಇದ್ದು, ಈ ರೀತಿ ಪ್ರತಿದಿನ ದಿನಕ್ಕೆ ೫ ಬಾರಿ ಮುಸ್ಲಿಂ ಬಾಂಧವರು ನಮಾಜ್ ಮಾಡುತ್ತಾರೆ. ಪ್ರತಿ ಶುಕ್ರವಾರ ವಿಶೇ‌ಷವಾಗಿ ಯಾರೋ ಒಬ್ಬ ವ್ಯಕ್ತಿ ಮೈಕ್ ಗಳಲ್ಲಿ ಮಾತನಾಡುತ್ತಾರೆ. ಹೀಗೆ ಪ್ರತಿದಿನ ಜೋರಾಗಿ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮ ಮೀರಿ ಮಿತಿಗಿಂತಲೂ ಹೆಚ್ಚಿಗೆ ಧ್ವನಿವರ್ಧಕಗಳನ್ನು ಹಾಕುವುದರಿಂದ ವಿದ್ಯಾರ್ಧಿಗಳಿಗೆ ವಿದ್ಯಾಭ್ಯಾಸದ ಕಡೆಗೆ ಗಮನ ಕೊಡಲು ಆಗುವುದಿಲ್ಲ. ಅದೇ ರೀತಿ ವಯೋವೃದ್ಧರಿಗೆ ಆರೋಗ್ಯದ ಸಮಸ್ಯೆ ಇದ್ದು, ಅಂತಹವರಿಗೆ ಬೇರೆ ಬೇರೆ ಸಮಸ್ಯೆಗಳು ಉಲ್ಬಣವಾಗುತ್ತಿದೆ. ಹೃದಯ ರೋಗ ಸಮಸ್ಯೆ ಇರುವವರಿಗೆ ಸಮಸ್ಯೆ ಉಂಟಾಗುತ್ತಿದೆ ಹಾಗೂ ಬೇರೆ ಧರ್ಮದವರು ತಾವು ಪ್ರಾರ್ಥನೆ ಹಾಗೂ ಧ್ಯಾನ ಮಾಡಲು ಆಗುವುದಿಲ್ಲ. ಮತ್ತು ಕೊವೀಡ್ ಸಮಯದಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿಯೇ ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯವಿದೆ. ಆದರೆ ಎಲ್ಲಾ ಮಸೀದಿಗಳು ಊರಿನೊಳಗಡೆ ಇದ್ದು, ವಾಸವಾಗಿರುವ ಮನೆಗಳ ಮಧ್ಯದಲ್ಲಿಯೇ ಇರುವುದರಿಂದ ವಿದ್ಯಾರ್ಥಿಗಳಿಗೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಈ ರೀತಿ ಧ್ವನಿವರ್ಧಕಗಳು ನಿರ್ಬಂಧ ಹೇರಿ ಅವುಗಳನ್ನು ತೆರವುಗೊಳಿಸಬೇಕೆಂದು ಹರ್ಷ ಮುತಾಲಿಕ್ ಅವರು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಮಾಡಿದ್ದರು.
ಈ ಮನವಿಯನ್ನು ಪುರಸ್ಕರಿಸಿರುವ ಪೊಲೀಸ್ ಮಹಾ ನಿರ್ದೇಶಕರು ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು ಹಾಗೂ ಎಲ್ಲಾ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಸಿದಿಗಳಲ್ಲಿನ ಧ್ವನಿವರ್ಧಕಗಳಿಗೆ ನಿರ್ಭಂಧ ಹೇರಿ ಅವುಗಳನ್ನು ತೆರವುಗೊಳಿಸುವಂತೆ ಹಾಗೂ ನಿಯಾಮಾನುಸಾರ ಸೂಕ್ತ ಕ್ರಮ ಕೈಕೊಳ್ಳುವಂತೆ ಆದೇಶ ನೀಡಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...