ಕನ್ಯಾನ: ಐ.ಟಿ.ಐ. ಶಿಕ್ಷಣದ ಮೂಲಕ ಉತ್ತಮ ತರಬೇತಿ ಪಡೆದು ಸ್ವ ಉದ್ಯೋಗದ ಮೂಲಕ ಬದುಕನ್ನು ರೂಪಿಸಿಕೊಳ್ಳಿ. ನಡೆದು ಬಂದ ದಾರಿಯನ್ನು ಸಿಂಹಾವಲೋಕನದ ಮೂಲಕ ಅವಲೋಕನ ಮಾಡಿಕೊಂಡು ನಮ್ಮ ಸಂಸ್ಥೆಯ ಬಗ್ಗೆ ಗೌರವ ಇಟ್ಟುಕೊಳ್ಳಿ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಒಡಿಯೂರು ಶ್ರೀ ಗುರುದೇವ ಐ.ಟಿ.ಐ ಕನ್ಯಾನದ 2020-21ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಮತ್ತು 2018-20ನೇ ಸಾಲಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಪೂರ್ಣಗೊಳಿಸಿದ ಪ್ರಮಾಣ ಪತ್ರವನ್ನು ವಿತರಿಸುತ್ತಾ ಮಾತನಾಡಿದರು. ಐ.ಟಿ.ಐ. ಶಿಕ್ಷಣದ ಮೂಲಕ ಉತ್ತಮ ತರಬೇತಿ ಪಡೆದು ಸ್ವ ಉದ್ಯೋಗದ ಮೂಲಕ ಬದುಕನ್ನು ರೂಪಿಸಿಕೊಳ್ಳಿ. ನಡೆದು ಬಂದ ದಾರಿಯನ್ನು ಸಿಂಹಾವಲೋಕನದ ಮೂಲಕ ಅವಲೋಕನ ಮಾಡಿಕೊಂಡು ನಮ್ಮ ಸಂಸ್ಥೆಯ ಬಗ್ಗೆ ಗೌರವ ಇಟ್ಟುಕೊಳ್ಳಿ. ಯೌವನ ಮತ್ತು ಸಂಪತ್ತನ್ನು ಸದ್ವಿನಿಯೋಗ ಮಾಡಿಕೊಂಡು ಸಂಸ್ಕಾರಯುತ ಜೀವನವನ್ನು ನಡೆಸಿ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನಗೈದರು.
ಬೆಳ್ತಂಗಡಿ ಸರಕಾರಿ ಕೈಗಾರಿಕಾ ಸಂಸ್ಥೆಯ ತರಬೇತಿ ಅಧಿಕಾರಿ ಹರೀಶ್ ಮುಖ್ಯ ಅತಿಥಿಯಾಗಿ ಆಗಮಿಸಿ, ಮಾತನಾಡುತ್ತಾ, ತಾಂತ್ರಿಕ ಶಿಕ್ಷಣದ ಮಹತ್ವ ಹಾಗೂ ಉದ್ಯೋಗದ ಜೊತೆ ಉನ್ನತ ವಿದ್ಯಾಭ್ಯಾಸವನ್ನು ಹೇಗೆ ನಡೆಸಬಹುದೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.
ಇನ್ನೋರ್ವ ಅತಿಥಿ ವಿಟ್ಲ ವಿಠಲ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಮಾತನಾಡುತ್ತಾ, ಐ.ಟಿ.ಐ. ಶಿಕ್ಷಣಕ್ಕೆ ವಿಫುಲ ಉದ್ಯೋಗವಕಾಶಗಳಿವೆ ಹಾಗೂ ಅದನ್ನು ಸದುಪಯೋಗ ಪಡೆದುಕೊಂಡು ಉದ್ಯೋಗದಾತರಾಗಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಮುನ್ನಡೆಯಿರಿ ಎಂದರು.
ಗುರುದೇವ ವಿದ್ಯಾಪೀಠದ ಮುಖ್ಯ ಗುರು ಜಯಪ್ರಕಾಶ ಶೆಟ್ಟಿ, ಹಿರಿಯ ಪತ್ರಕರ್ತ ಯಶವಂತ ವಿಟ್ಲ, ಲಿಂಗಪ್ಪ ಗೌಡ ಪನೆಯಡ್ಕ, ಸೋಮಪ್ಪ ನಾಕ್ ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಚಾರ್ಯ ಕರುಣಾಕರ ಎನ್.ಬಿ. ಪ್ರಾಸ್ತವಿಸಿ, ಸ್ವಾಗತಿಸಿದರು. ಜಯಂತ್ ಆಜೇರು ವಂದಿಸಿದರು. ಅಶ್ವಥ್ ಯಂ. ರವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here