Saturday, April 20, 2024

ಗಡಿಯಲ್ಲಿ ನಮ್ಮ ಸೈನಿಕರ ಬಲವನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ: ಪಿ.ಎಂ. ನರೇಂದ್ರ ಮೋದಿ

ಜೈಪುರ : ನರೇಂದ್ರ ಮೋದಿ ಅವರು 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಪ್ರತಿ ವರ್ಷ ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಈ ವರ್ಷವೂ ಅವರು ರಾಜಸ್ಥಾನದ ಜೈಸಲ್ಮೇರ್ ಗಡಿಯಲ್ಲಿ ಇಂದು ಭಾರತೀಯ ಸೈನಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು. ಪ್ರಧಾನಿ ಮೋದಿಯನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಬೆಳಿಗ್ಗೆ 9:15ಕ್ಕೆ ಜೈಸಲ್ಮೇರ್ ನ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತಲುಪಿತು. ಪ್ರಧಾನಿ ಅವರೊಂದಿಗೆ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ, ಬಿಎಸ್​ಎಫ್ ಮಹಾ ನಿರ್ದೇಶಕ ರಾಕೇಶ್ ಅಸ್ತಾನಾ ಕೂಡ ಭಾಗಿ ಆಗಿದ್ದರು.

ಪ್ರದಾನಿ ಮೋದಿ ಮಾತನಾಡುತ್ತಾ, “ಭಾರತವು ಇತರರನ್ನು ಅರ್ಥಮಾಡಿಕೊಳ್ಳುವ ಮತ್ತು ಅವರಿಗೆ ಅರ್ಥವಾಗುವಂತೆ ಮಾಡುವ ನೀತಿಯನ್ನು ನಂಬುತ್ತದೆ. ಆದರೆ ಇದನ್ನು ಪರೀಕ್ಷೆ ಮಾಡಲು ಹೋದರೆ ನಮ್ಮ ದೇಶ ತಕ್ಕ ಉತ್ತರ ನೀಡುತ್ತದೆ,” ಎಂದರು. ಈ ಮೂಲಕ ಲಡಾಕ್​ನಲ್ಲಿ ನಿರಂತರವಾಗಿ ಕಾಲು ಕೆರೆದುಕೊಂಡು ಜಗಳ ಮಾಡುತ್ತಿರುವ ಚೀನಾಗೆ ತಿರುಗೇಟು ನೀಡಿದ್ದಾರೆ.

“ನಮ್ಮ ಸೈನಿಕರು ನಮ್ಮ ಗಡಿಯನ್ನು ರಕ್ಷಿಸುವುದನ್ನು ತಡೆಯಲು ಜಗತ್ತಿನ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ. ಇದನ್ನು ಪರೀಕ್ಷೆ ಮಾಡಲು ಬಂದವರಿಗೆ ತಕ್ಕ ಉತ್ತರ ನೀಡುವ ಶಕ್ತಿ ನಮಗಿಗೆ ಎಂಬುದನ್ನು ತೋರಿಸಿಕೊಟ್ಟಿದ್ದೇವೆ,” ಎಂದರು ಮೋದಿ.
ಸೈನಿಕರಿಗೆ ಕೆಲ ಕಿವಿ ಮಾತನ್ನೂ ಹೇಳಿರುವ ಮೋದಿ, ನಿತ್ಯ ನೀವು ಯೋಗ ಮಾಡಿ. ಅಲ್ಲದೆ, ಸಹ ಸೈನಿಕರಿಂದ ನಿಮಗೆ ಗೊತ್ತಿಲ್ಲದ ಭಾರತದ ಭಾಷೆಯನ್ನು ಕಲಿತುಕೊಳ್ಳಿ ಎಂದು ಹೇಳಿದ್ದಾರೆ.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...