Saturday, April 20, 2024

ಹರೆಯದ ಕರೆ

ಕಾಯುತಿರುವೆ ಬಾರೊ ನೀನು
ಎದೆಯನೇರಿ ಮೆರೆಯುತ
ಬೇಯುತಿರುವೆ ಬೇಗ ಸೇರೊ
ಕತ್ತಲೊಳಗೆ ಕರಗುತ

ಅರಳುತಿದೆ ಮಿಲನ ಕುಸುಮ
ನಿನ್ನ ನೆನೆದ ಕ್ಷಣದಲಿ
ಕೆರಳುತಿದೆ ವಿರಹ ತಾಪ
ಇರುಳ ರಾಗ ರಸದಲಿ

ಹರೆಯ ಉಕ್ಕಿ ಹರಿಯುತಿದೆ
ಬಾಚಿಕೊಳ್ಳೊ ಎದೆಯಲಿ
ಒಲವ ಚಿಕ್ಕಿ ಎಣಿಸೊ ನೀನು
ಬಾನ ಸೀರೆ ಸೆರಗಲಿ

ರಾಗರತಿಗೆ ರಂಗು ತುಂಬಿ
ಅರಳಿಸೆನ್ನ ಒಲವಲಿ
ಇರುಳು ತಾ ಸರಿಯದಂತೆ
ನರಳಿಸೆನ್ನ ಗೆಲುವಲಿ

ನೀ.ಶ್ರೀಶೈಲ ಹುಲ್ಲೂರು

More from the blog

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ವೇಗಕ್ಕೆ ಬಲ ತುಂಬಿದ ಕಾರ್ಯಕರ್ತರು, ಮುಖಂಡರು

ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಗುರುವಾರ ಬೆಳಗ್ಗಿನಿಂದಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಿಗೆ ತೆರಳಿ...

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...