Saturday, April 13, 2024

ರುಡ್‌ಸೆಟ್ ಸಂಸ್ಥೆ: ಆಡಳಿತ ವಿಭಾಗದ ನೂತನ ಕಟ್ಟಡ ಉದ್ಘಾಟನೆ

ಉಜಿರೆ: ಕೆನರಾ ಬ್ಯಾಂಕ್‌ನಲ್ಲಿ ಸಂಪೂರ್ಣವಾಗಿ ಆಧುನಿಕ ತಂತ್ರಜ್ಞಾನ ಬಳಸಿದ್ದು, ಸಿಂಡಿಕೇಟ್ ಬ್ಯಾಂಕ್‌ನ ಗ್ರಾಹಕರು ಯಾವುದೇ ಕೆನರಾ ಬ್ಯಾಂಕ್ ಶಾಖೆಗೆ ಹೋಗಿ ತಮ್ಮ ವ್ಯವಹಾರ ನಡೆಸಬಹುದು ಎಂದು ಕೆನರಾ ಬ್ಯಾಂಕ್‌ನ ಆಡಳಿತ ನಿರ್ದೇಶಕಿ ಎ. ಮಣಿಮೇಖಲಾಯಿ ಹೇಳಿದರು.
ಅವರು ಗುರುವಾರ ಉಜಿರೆಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಆಡಳಿತ ವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ನಿರ್ದೇಶನದಂತೆ ವಿವಿಧ ಯೋಜನೆಯಡಿ ಕೆನರಾ ಬ್ಯಾಂಕ್‌ ಗ್ರಾಹಕರಿಗೆ ಸಾಲ ನೀಡುತ್ತಿದೆ. ನಿರುದ್ಯೋಗಿಗಳು ರುಡ್‌ಸೆಟ್ ಸಂಸ್ಥೆ ಸಂಸ್ಥೆಗಳ ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಕೆನರಾ ಬ್ಯಾಂಕ್ ‌ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಶೇ.75 ರಷ್ಟು ಮಂದಿ ಸಾಲ ಮರುಪಾವತಿಸಿ ಯಶಸ್ವಿಯಾಗಿ ಸ್ವ-ಉದ್ಯೋಗ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಾರತದಲ್ಲಿ ಅಪಾರ ಜನಸಂಖ್ಯೆ ಎಂದೂ ಸಮಸ್ಯೆ ಆಗಲಾರದು. ಪ್ರತಿಯೊಬ್ಬ ವ್ಯಕ್ತಿಯಲ್ಲಿ ಪ್ರತಿಭೆ, ಬುದ್ಧಿವಂತಿಕೆ ಹಾಗೂ ಸಾಮರ್ಥ್ಯ ಇರುತ್ತದೆ. ಅವರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಿ ಸ್ವ-ಉದ್ಯೋಗ ಮಾಡಲು ಪ್ರೇರಣೆ ನೀಡುವುದೇ ರುಡ್‌ಸೆಟ್ ಸಂಸ್ಥೆಯ ಉದ್ದೇಶವಾಗಿದೆ. 1982 ರಲ್ಲಿ ಉಜಿರೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ರುಡ್‌ಸೆಟ್ ಸಂಸ್ಥೆ ಇಂದು ದೇಶದೆಲ್ಲೆಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಮಹಿಳೆಯರು ಕೂಡಾ ಸ್ವ-ಉದ್ಯೋಗಿಗಳಾಗಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕರುಗಳಾದ ರಾಕೇಶ್‌ ಕಶ್ಯಪ್ ಮತ್ತು ಬಿ.ಯೋಗೀಶ್ ‌ಆಚಾರ್ಯ, ಡಿ.ಜಿ.ಎಂ. ಸತ್ಯಮೂರ್ತಿ ಹಾಗೂ ಬಿಪುಲ್‌ ಚಂದ್ರ ಶಹಾ, ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಆಡಳಿತ ನಿರ್ದೇಶಕ ಎಂ.ಜನಾರ್ದನ್ ಮತ್ತು ನಿರ್ದೇಶಕ ಪಿ.ಸಿ. ಹಿರೇಮಠ ಉಪಸ್ಥಿತರಿದ್ದರು.

More from the blog

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...