Tuesday, April 9, 2024

ಶಾಲೆಗಳನ್ನು ತೆರೆಯುವುದು ಕಾಲೇಜು ಆರಂಭದ ಯಶಸ್ಸಿನ ಮೇಲೆ ಅವಲಂಬಿತ: ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ

ಬೆಂಗಳೂರು: ಪಿಯುಸಿ ಹಾಗೂ ಶಾಲೆಗಳನ್ನು ಪುನಃ ತೆರೆಯುವುದು ಮಂಗಳವಾರ ಪುನರಾರಂಭಗೊಂಡಿರುವ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ಆರಂಭದ ಯಶಸ್ಸಿನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ ನಾರಾಯಣ ತಿಳಿಸಿದ್ದಾರೆ.
ಮಂಗಳವಾರ ಮತ್ತೆ ತೆರೆಯಲಾದ ಕೆಲವು ಕಾಲೇಜುಗಳ ಪರಿಶೀಲನೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನ್‌ಲೈನ್ ತರಗತಿಗಳನ್ನು ನಡೆಸಲಾಗಿದ್ದರೂ ಹೆಚ್ಚಿನ ವಿದ್ಯಾರ್ಥಿಗಳು ತರಗತಿಯಿಂದ ತೃಪ್ತರಾಗಿಲ್ಲ. ಈ ಬಗ್ಗೆ ದೂರು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಶಾಲೆಗಳು ಮತ್ತು ಪಿಯುಸಿಗಳನ್ನು ಪುನಃ ತೆರೆಯುವುದು ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ಆರಂಭದ ಯಶಸ್ಸಿನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ. ಶಾಲೆಗಳು ಮತ್ತು ಪಿಯುಸಿ ಕಾಲೇಜುಗಳನ್ನು ಮತ್ತೆ ತೆರೆಯುವ ಮೊದಲು ರಾಜ್ಯ ಸರ್ಕಾರ ಹಲವಾರು ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ. ಈಗ ಆರಂಭವಾಗಿರುವ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ಬಳಿಕ ಶಾಲಾರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಕಾಲೇಜು ತರಗತಿಗಳ ಆರಂಭಕ್ಕೆ ಸರ್ಕಾರ ನಿರ್ಧರಿಸಿದ ಬಳಿಕ ಕೊರೊನಾ ಪರೀಕ್ಷೆ ಉಚಿತವಾಗಿ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...