Saturday, April 6, 2024

ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ

ವಿಟ್ಲ: ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ ಹಾಗೂ ಉಪಾಧ್ಯಕ್ಷರಾಗಿ ಬಾಬು ಕೆ.ವಿ. ಅವರು ಅವಿರೋಧವಾಗಿ ಆಯ್ಕೆಗೊಂಡರು.

ಬುಧವಾರ ವಿಟ್ಲ ಪ್ರಧಾನ ಕಚೇರಿಯಲ್ಲಿ ಚುನಾವಣಾಧಿಕಾರಿ ನಾಗೇಂದ್ರ ಬಿ. ಅವರು ಚುನಾವಣೆ ಪ್ರಕ್ರಿಯೆ ನಡೆಸಿ, ಬಳಿಕ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.
ನಿರ್ದೇಶಕರಾಗಿ ಡಾ.ಗೀತಪ್ರಕಾಶ್ ಎ, ರಾಘವ ಪೂಜಾರಿ, ರಮೇಶ್ ಕುಮಾರ್ ಪಿ, ಅಭಿಜಿತ್ ಜೆ, ರವಿ ಬಿ.ಕೆ, ಮಾಧವ ಪಿ, ಶ್ರೀಧರ್ ಬಿ, ವನಿತಾ, ಪುಷ್ಪ ಎಸ್, ಜಗದೀಶ ವಿ, ಸಂಜೀವ ಪೂಜಾರಿ ಎಂ. ಅವರು ಆಯ್ಕೆಗೊಂಡರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಜಯಂತ ಪಿ. ಸಹಕರಿಸಿದರು.
ಅಭಿವೃದ್ಧಿ ಸಮಿತಿ ಸದಸ್ಯರಾದ ಚಂದ್ರಹಾಸ ಸುವರ್ಣ, ಪ್ರಕಾಶ್, ನರೇಂದ್ರ ಸಿ, ಸಂಜೀವ ಪೂಜಾರಿ ಡಿ, ಗಿರಿಯಪ್ಪ ಪೂಜಾರಿ, ರವಿಚಂದ್ರ, ಹರೀಶ್ ಸಿ.ಎಚ್, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಜಗನ್ನಾಥ್ ಸಾಲಿಯಾನ್, ವಿಟ್ಲ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಮೋಹನದಾಸ ಉಕ್ಕುಡ ಮತ್ತು ಪಿಗ್ಮಿ ಸಂಗ್ರಹಗಾರರಾದ ಜಯಪ್ರಕಾಶ್, ವಿವೇಕ್, ಮೋನಾಕ್ಷ, ಸುಂದರ ಪೂಜಾರಿ, ಬಿಲ್ಲವ ಸಂಘದ ಪದಾಧಿಕಾರಿಗಳು, ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...