Sunday, April 14, 2024

ಎಲ್‌ಎಂಎಸ್ ಪ್ರಾಜೆಕ್ಟ್ ವಿಡಿಯೋ ತಯಾರಿ ಕಾರ್ಯಾಗಾರ

ಬಂಟ್ವಾಳ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾದೇಶಿಕ ಕಛೇರಿ ಮಂಗಳೂರು ಇದರ ನಿರ್ದೇಶನದಂತೆ ರೋಟರಿ ಕ್ಲಬ್ ಬಂಟ್ವಾಳ, ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇವುಗಳ ಐಕ್ಯೂಎಸಿ ಘಟಕಗಳ ಜಂಟಿ ಆಶ್ರಯದಲ್ಲಿ ಎಲ್‌ಎಂಎಸ್ ಪ್ರಾಜೆಕ್ಟ್ ವಿಡಿಯೋ ತಯಾರಿ ಕಾರ್ಯಾಗಾರವು ಬಿ.ಸಿ ರೋಡಿನ ಗೋಲ್ಡನ್ ಜ್ಯುಬುಲಿ ಸಭಾಭವನದಲ್ಲಿ ಜರಗಿತು.
ಈ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ನ ನಿಕಟಪೂರ್ವ ಗವರ್ನರ್ ರೊಟೇರಿಯನ್ ಪ್ರಕಾಶ್ ಕಾರಂತ್, ಕಂಪ್ಯೂಟರ್ ಪರದೆಯನ್ನು ಮೌಸ್ ಕ್ಲಿಕ್ ಮೂಲಕ ಅನಾವರಣಗೊಳಿಸಿ ಕಾರ್ಯಗಾರವನ್ನು ಉದ್ಘಾಟಿಸಿ, ಮಾತನಾಡಿ, ಶಿಕ್ಷಕ ಸ್ನೇಹಿ ತರಬೇತಿಗಳು ಕೊರೋನಾ ಕಾಲಘಟ್ಟದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ನವಚೈತನ್ಯವನ್ನು ತಂದುಕೊಡುತ್ತದೆ ಎಂದರು.

ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕ ಡಾ.ಅಪ್ಪಾಜಿ ಗೌಡ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಮ್ಮ ಇಲಾಖೆಯ ಕನಸಿನ ಕೂಸಾದ ಎಲ್‌ಎಂಎಸ್ ಹಾಗೂ ಇ-ಕಂಟೆಂಟ್ ತಯಾರಿಯು ಕೋವಿಡ್ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಕಲಿಕಾ ಸಾಮಾಗ್ರಿಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧ್ಯಾಪಕರಿಗೆ ಹೆಚ್ಚುವರಿ ತರಬೇತಿಯನ್ನು ನೀಡುವ ಸಲುವಾಗಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇ-ಕಂಟೆಂಟ್ ತಯಾರಿ ಪ್ರಾದೇಶಿಕ ಕಛೇರಿ ಮಂಗಳೂರಿನ ವಿಶೇಷಾಧಿಕಾರಿ ಪ್ರೊ.ಸ್ಟೀಫನ್ ಕ್ವಾಡ್ರಸ್ ಯೋಜನೆಯ ಉದ್ದೇಶ ಮತ್ತು ಸ್ವರೂಪವನ್ನು ಸಭೆಗೆ ತಿಳಿಸುತ್ತಾ ತರಬೇತಿಯ ಫಲಾನುಭವಿಗಳಿಗೆ ಜವಾಬ್ದಾರಿಯುತವಾಗಿ ಹಾಗೂ ವಿದ್ವತ್‌ಪೂರ್ಣವಾಗಿ ಯೋಜನೆಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.

ನ್ಯಾಕ್ ಪ್ರಾದೇಶಿಕ ಕಛೇರಿ ಮಂಗಳೂರಿನ ವಿಶೇಷಾಧಿಕಾರಿ ಡಾ. ಜಯಕರ ಭಂಡಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಎಲ್‌ಎಂಎಸ್ ಯೋಜನೆಯ ಪೂರ್ವ ಯೋಜನೆ ಹಾಗೂ ನಿಗದಿಪಡಿಸಿಕೊಂಡ ಗುರಿಗಳ ಬಗ್ಗೆ ತಿಳಿಸಿದರು. ಇ-ಕಂಟೆಂಟ್ ತಯಾರಕರು ಕ್ಷಿಪ್ರಗತಿಯಲ್ಲಿ ಕಾರ್ಯೊನ್ಮುಖರಾಗುವಂತೆ ಸೂಚಿಸಿದರು.
ಕಾರ್ಯಕ್ರಮದ ಆಯೋಜಕರಾದ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಭಟ್ ಅಜಕ್ಕಳ ಮಾತನಾಡಿ, ಬದಲಾದ ಸಮಯದಲ್ಲಿ ಬದಲಾದ ಮನಸ್ಥಿತಿಯೊಂದಿಗೆ ಶೈಕ್ಷಣಿಕ ವಲಯದ ಅವಶ್ಯಕತೆಯಾದ ಎಲ್‌ಎಂಎಸ್ ಯೋಜನೆಯನ್ನು ಪರಿಪೂರ್ಣತೆಯತ್ತ ತೆಗೆದುಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಕಾರ್ಯಕ್ರಮದ ಮತ್ತೋರ್ವ ಆಯೋಜಕರಾದ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ಕೋವಿಡ್ ಸಮಯದಲ್ಲಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ತೊಂದರೆಯಾಗದಂತೆ ಶೈಕ್ಷಣಿಕ ಚಟುವಟಿಕೆಗಳನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗಲು ಅಧ್ಯಾಪಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಈ ಯೋಜನೆಯು ಮಾದರಿಯಾಗಿದೆ ಎಂದರು.

ಬಂಟ್ವಾಳ ರೋಟರಿ ಕ್ಲಬ್ ನ ಕಾರ್ಯದರ್ಶಿ ರೊಟೇರಿಯನ್ ವಾಣಿ ಪಿ. ಕಾರಂತ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೊಟೇರಿಯನ್ ಮಂಜುನಾಥ ಆಚಾರ್ಯ ನಿಕಟ ಪೂರ್ವ ಅಧ್ಯಕ್ಷರು ರೋಟರಿ ಕ್ಲಬ್ ಬಂಟ್ವಾಳ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ರೋಟರಿ ಕ್ಲಬ್ ನ ಅಧ್ಯಕ್ಷ ಕೆ. ನಾರಾಯಣ ಹೆಗಡೆ ಮಾತನಾಡಿ, ಬದಲಾವಣೆ ಜಗದ ನಿಯಮ ಬದಲಾದ ಪರಿಸ್ಥಿತಿಯಾದ ಕೋವಿಡ್ ಸಂಕಷ್ಟದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೊಸ ಆಯಾಮ ನೀಡಿದ ಆನ್‌ಲೈನ್ ತರಗತಿಗಳು ಹಾಗೂ ತರಬೇತಿ ಕಾರ್ಯಕ್ರಮವನ್ನು ಶ್ಲಾಘಿಸಿದರು.
ಕಾರ್ಯಾಗಾರಕ್ಕೆ ಪ್ರೊ.ಮಣಿ ಭೂಷಣ್ ಡಿಸೋಜ, ತರಬೇತುದಾರರಾಗಿ ಆಗಮಿಸಿ, ಎಲ್‌ಎಂಎಸ್ ಯೋಜನೆಯಡಿ ಇ-ಕಂಟೆಂಟ್ ವಿಡಿಯೋ ತಯಾರಿಕೆಗೆ ಅಗತ್ಯವಾದ OBS ಹಾಗೂ Openshot editor ಸಾಪ್ಟ್‌ವೇರ್ ಬಳಸುವುದರ ಬಗ್ಗೆ ಹ್ಯಾಂಡ್ಸ್ ಆನ್ ತರಬೇತಿ ನೀಡಿದರು.

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಚಾಲಕ ವಿನಯ್ ಎಂ.ಎಸ್ ಐಕ್ಯೂಎಸಿ ಸ್ವಾಗತಿಸಿ, ಐಕ್ಯೂಎಸಿ ಸಹ ಸಂಚಾಲಕ ನಸೀಮಾ ಬೇಗಂ ಎಸ್. ವಂದಿಸಿದರು. ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಸಂಚಾಲಕ ಪ್ರೊ.ನಂದಕಿಶೋರ್ ಎಸ್. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು, ಪುಂಜಾಲಕಟ್ಟೆ, ಮುಡಿಪು, ವಿಟ್ಲ ಹಾಗೂ ಎಸ್‌ವಿಎಸ್ ಕಾಲೇಜು ಬಂಟ್ವಾಳ ಇಲ್ಲಿನ ಸಹ ಹಾಗೂ ಸಹಾಯಕ ಪ್ರಾಧ್ಯಾಪಕರು ಭಾಗವಹಿಸಿದ್ದರು.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...